ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಪಾದಯಾತ್ರೆ

ಚನ್ನಪಟ್ಟಣ, ಜು.26- ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ 800ಕ್ಕೂ ಹೆಚ್ಚು ರೈತರು ಪಟ್ಟಣದಿಂದ ಬೆಂಗಳೂರಿಗೆ ಪಾದಯಾತ್ರೆ ಪ್ರಾರಂಭಿಸಿದರು.
ರೈತರ ನಡೆ ಬೆಂಗಳೂರು ಕಡೆಗೆ ಎಂಬ ಘೋಷ ವಾಕ್ಯದಡಿ ರೈತರು ಪಟ್ಟಣದ ಕೆಂಗಲ್ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಮುಖ್ಯಮಂತ್ರಿಗಳ ಸ್ವಕ್ಷೇತ್ರ ಆಗಿರುವುದರಿಂದ ಇಲ್ಲಿಂದಲೇ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಪಾದಯಾತ್ರೆ ಮಾಡಿ ಬೆಂಗಳೂರನ್ನು ತಲುಪಿ ಮುಖ್ಯಮಂತ್ರಿಗಳ ಗೃಹ ಕಚೇರಿ ಬಳಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ರೈತರ ಮುಖಂಡರು ಹೇಳಿದ್ದಾರೆ. ರೇಷ್ಮೆ ನಾಡಿನ ರೈತರಲ್ಲದೆ ಗದಗ, ಹಾವೇರಿ ಮತ್ತಿತರ ಭಾಗಳಿಂದಲೂ ಸಹ ನೂರಾರು ರೈತರು ಪಾದಯಾತ್ರೆಯಲ್ಲಿ ಬರುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ರೈತರ ಪರ ಸಂಘಟನೆಗಳ ಸದಸ್ಯರು ಸಾಥ್ ನೀಡಿದ್ದಾರೆ. ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರಾದ ಕುಮಾರ್ ಬಂಗಾರಪ್ಪ , ರೇಣುಕಾಚಾರ್ಯ, ತೇಜಸ್ವಿನಿಗೌಡ, ಅ.ದೇವೇಗೌಡ, ನಟ ಶ್ರೀನಗರ ಕಿಟ್ಟಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ