ಅಪಘಾತದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಪಾರು

ತುಮಕೂರು, ಜು.26- ಮಾಜಿ ಸಚಿವ ಸೊಗಡು ಶಿವಣ್ಣ ಅವರು ಚಲಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೆಲಸದ ನಿಮಿತ್ತ ಮಂಡಿಪೇಟೆಗೆ ತೆರಳುತ್ತಿದ್ದಾಗ ಚರ್ಚ್ ಸರ್ಕಲ್ ಬಳಿ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ ನಿಲ್ದಾಣದಿಂದ ಶಿರಾ ರಸ್ತೆ ಕಡೆಗೆ ವೇಗವಾಗಿ ಚಲಿಸಿದ ಖಾಸಗಿ ಬಸ್ ಶಿವಣ್ಣ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಸಣ್ಣ ಪುಟ್ಟ ಗಾಯಗಳಾಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಬಂದು ಶಿವಣ್ಣ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸಂಚಾರಿ ಹಾಗೂ ನಗರ ಠಾಣೆ ಪೆÇಲೀಸರು ಸ್ಥಳಕ್ಕೆ ದೌಡಾಯಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ