ನವದೆಹಲಿ, ಜು.26-ಭಾರತದ ಗಡಿಯಲ್ಲಿ ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಭಾರತೀಯ ಸೇನೆ ಸರ್ವ ಸನ್ನದ್ಧವಾಗಿದೆ ಎಂದು ಉತ್ತರ ಕಮಾಂಡ್ ಜನರಲ್ ಆಫೀಸರ್ ಕಮಾಂಡಿಂಗ್(ಜಿಒಸಿ) ರಣಬೀರ್ ಸಿಂಗ್ ಹೇಳಿದ್ದಾರೆ. 19ನೇ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಯಾವುದೇ ದೇಶವು ಗಡಿಯಲ್ಲಿ ಉದ್ದಟತನ ಪ್ರದರ್ಶಿಸಿದರೂ, ಆ ಸವಾಲುಗಳನ್ನು ಎದುರಿಸಲು ನಮ್ಮ ಸೇನಾ ಪಡೆಗಳ ಸಜ್ಜಾಗಿವೆ ಎಂದು ಪಾಕಿಸ್ತಾನ ಮತ್ತು ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದರು.






