ಊಟ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Varta Mitra News

ಮೈಸೂರು,ಜು.26-ಇಲ್ಲಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ರಾತ್ರಿ ಊಟ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.
ರಾತ್ರಿ ಊಟ ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಕ್ಷಣ ಶಿಕ್ಷಣ ಸಂಸ್ಥೆಯ ಮೇಲುಸ್ತುವಾರಿ ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ರಾತ್ರಿ ಈ ಸಂಸ್ಥೆಯಲ್ಲಿ ಆಂಧ್ರ ಶೈಲಿಯ ರಾಜ ಕರಿ ಆಹಾರ ಮಾಡಲಾಗಿತ್ತು. ಈ ಆಹಾರದಲ್ಲಿ ಹುಳುಗಳು ಕಂಡುಬಂದಿತ್ತು ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ