ಹಾಸನ, ಜು.26- ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಅಲ್ಲಿನ ಕಳೆಕೆರೆ ಗ್ರಾಮದ ಕಾಫಿ ತೋಟವೊಂದರಲ್ಲಿ 20ಕ್ಕೂ ಅಧಿಕ ಕಾಡಾನೆಗಳು ಬೀಡುಬಿಟ್ಟಿವೆ.
ಸಕಲೇಶಪುರ ತಾಲೂಕಿನ ಹಳೆಕೆರೆ ಗ್ರಾಮದ ಮಲ್ಲಿಗೆ ಕಾಫಿ ಎಸ್ಟೇಟ್ಗೆ ನಾಲ್ಕು ಮರಿಯಾನೆ ಸೇರಿ 20 ಆನೆಗಳು ನುಗ್ಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕಾರ್ಮಿಕರು ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗಲು ಸಾಧ್ಯವಾಗದೆ ಪರದಾಡುವಂತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಆನೆಗಳನ್ನು ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ನಿನ್ನೆಯಷ್ಟೇ ಸಕಲೇಶಪುರದ ಮಠಸಾಗರ ಗ್ರಾಮದಲ್ಲಿ ಕಾಫಿ ತೋಟಕ್ಕೆ ನುಗ್ಗಿದ್ದ ಕಾಡಾನೆ ಅಲ್ಲಿ ಕೆಲಸ ಮಾಡುತ್ತಿದ್ದ ತೋಟದ ಮಾಲೀಕ ಎಂ.ಡಿ.ಯೋಗೇಶ್ ಅವರ ಮೇಲೆ ದಾಳಿ ನಡೆಸಿದ್ದರಿಂದ ಅವರು ಗಾಯಗೊಂಡಿದ್ದರು. ಇದೀಗ ಕಳೆಕೆರೆಯಲ್ಲಿ ಆನೆ ಕಾಣಿಸಿಕೊಂಡಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.