
ಚೆನ್ನೈ :ಜು-೨೭: ಅನಾರೋಗ್ಯಕ್ಕೊಳಗಾಗಿದ್ದ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬಂದಿದೆ ಎಂದು ಅವರ ಪುತ್ರ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ.
2016 ಅಕ್ಟೋಬರ್ ತಿಂಗಳಿನಿಂದ ಕರುಣಾನಿಧಿ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದ್ದು, ಕೆಲ ದಿನಗಳ ಹಿಂದೆ ಉಸಿರಾಟದ ಅನುಕೂಲಕ್ಕಾಗಿ ಟ್ರಾಚಿಯೊಸ್ಟಾಮಿ ಟ್ಯೂಬ್ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಎಂದು ಸ್ಟಾಲಿನ್ ಹೇಳಿದರು.
ಕರುಣಾನಿಧಿ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅವರ ನಿವಾಸ ಗೋಪಾಲಪುರಂನಲ್ಲಿ ಅಸಂಖ್ಯಾತ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ನೆರೆದಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಎಂಡಿಎಂಕೆ ಮುಖ್ಯಸ್ಥ ವೈಕೋ, ತಮಿಳುನಾಡು ಬಿಜೆಪಿ ಮುಖ್ಯಸ್ಥ ಟಿ. ಸೌಂದರಾಜನ್, ಮತ್ತಿತರರು ಕರುಣಾನಿಧಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಕುಟುಂಬ ಸದಸ್ಯರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೈಕೊ, ಕರುಣಾನಿಧಿ ಅವರು ಚೆನ್ನಾಗಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ. ಅದೇ ಗಟ್ಟಿ ಧ್ವನಿ ಮೂಲಕ ಅವರು ಮರಳುವ ವಿಶ್ವಾಸವಿರುವುದಾಗಿ ತಿಳಿಸಿದರು.
DMK chief Karunanidhi,recovery,M K Stalin