
ಹುಬ್ಬಳ್ಳಿ: ಈ ಶತಮಾನದ ಖಗ್ರಾಸ ಚಂದ್ರ ಗ್ರಹಣ ಇಂದು ರಾತ್ರಿ ಹಿಡಿಯಲಿದೆ. ಈ ಹಿನ್ನೆಲೆಯಲ್ಲಿ ಪ್ರತಿ ದೇವಸ್ಥಾನಗಳಲ್ಲಿ ಭಕ್ತರು ವಿಶೇಷ ಪೂಜೆ ನೇರವೇರಿಸುತ್ತಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ವಿವಿಧ ದೇವಸ್ಥಾನಗಳಿಗೆ ತೆರಳಿ ಜನ ವಿಶೇಷ ಪೂಜೆ ಗಳನ್ನು ಮಾಡುತ್ತಿದ್ದಾರೆ. ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ಭಕ್ತರು
ದೇವರ ದರ್ಶನ ಪಡೆಯುತ್ತಿದ್ದಾರೆ.ಇನ್ನೂ ನಿತ್ಯ ಪೂಜೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರಾತ್ರಿ ಹತ್ತು ಗಂಟೆಯ ನಂತರ ದೇವಸ್ಥಾನದಲ್ಲಿ ಪ್ರವೇಶ ನಿಷೇಧಿಸಲಾಗಿದೆ. ರಾತ್ರಿ ಹನ್ನೊಂದು ಗಂಟೆಯ ನಂತರ ಕೆಲವು ದೇವಸ್ಥಾನಗಳಲ್ಲಿ ವಿಶೇಷವಾಗಿ ಹೋಮ ಹವನಗಳು ಪ್ರಾರಂಭವಾಗಲಿವೆ.