ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತಿದ ಶೋಭಾ ಕರಂದ್ಲಾಜೆ

ಮೈಸೂರು, ಜು.27- ಎರಡನೆ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇಂದು ಬೆಳಗ್ಗೆ ಮೆಟ್ಟಿಲುಗಳಿಗೆ ಪೂಜೆ ಸಲ್ಲಿಸಿ ಬರಿಗಾಲಿನಲ್ಲಿ ಬೆಟ್ಟವನ್ನು ಏರಿ ದೇವಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಮಾತನಾಡಿ, ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆಯಾದಾಗ ಆಷಾಢ ಮಾಸದಲ್ಲಿ ಬರಿಗಾಲಿನಲ್ಲಿ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆದೆ. ಅಂದಿನಿಂದ ಈ ಪದ್ಧತಿಯನ್ನು ಮುಂದುವರೆಸಿಕೊಂಡು ಬಂದಿದ್ದೇನೆ. ಪ್ರತಿ ವರ್ಷ ಎರಡನೆ ಆಷಾಢ ಶುಕ್ರವಾರ ಬೆಟ್ಟ ಹತ್ತುತ್ತೇನೆ. ಈ ಬಾರಿಯೂ ಹತ್ತಿ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು. ಕೆಲವು ಬಿಜೆಪಿ ಮುಖಂಡರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ