ಈಗಲೇ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡುವುದು ಬೇಡ: ಒಮರ್ ಅಬ್ದುಲ್ಲಾ ಸಲಹೆ

ಕೋಲ್ಕತ್ತ:ಜು-28: ಈಗಲೇ ಪ್ರಧಾನಿ ಅಭ್ಯರ್ಥಿ ಯಾರು ಎಂದು ಬಿಂಬಿಸುವುದು ಬೇಡ, ಬಿಜೆಪಿಯನ್ನು ಸೋಲಿಸಿದ ಬಳಿಕ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಲಿ ಎಂದು ನ್ಯಾಷನಲ್ ಕಾನ್ಫೆರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಒಮರ್ ಅಬ್ದುಲ್ಲಾ ಸಲಹೆ ನೀಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ್ದು, ಸಂಯುಕ್ತ ರಂಗ ರಚನೆ ಮಾಡುವ ಸಂಬಂಧ ಒಮರ್ ಅಬ್ದುಲ್ಲಾ ಮತ್ತು ಮಮತಾ ಬ್ಯಾನರ್ಜಿ ಸುಮಾರು 3 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಈಗಾಲೇ ಪ್ರಧಾನಿ ಅಭ್ಯರ್ಥಿಯ ಘೋಷಣೆ ಮಾಡಿದರೆ ಗೊಂದಲ ಅಥವಾ ಅಸಮಾಧಾನಗಳು ಉಂಟಾಗಬಹುದು ಆದ್ದರಿಂದ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಘೊಷಣೆ ಮಾಡಬಾರದು. ಮೊದಲು ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಸಂಯುಕ್ತ ರಂಗ ವೇದಿಕೆಯಲ್ಲಿ ಸಂಘಟಿಸುವ ಕೆಲಸವಾಗಬೇಕು ಎಂದು ಒಮರ್ ಹೇಳಿದ್ದಾರೆ.

ಸಮಯುಕ್ತ ರಂಗ ಒಕ್ಕೂಟವನ್ನು ವಿಭಜಿಸುವಂತಹ ಯಾವುದೇ ಹೆಸರನ್ನು ಆಯ್ಕೆ ಮಾಡಬೇಡಿ ಎಂದು ಓಮರ್ ಅಬ್ದುಲ್ಲ ಮಮತಾ ಬ್ಯಾನರ್ಜಿಗೆ ಹೇಳಿದ್ದಾರೆ ಎನ್ನಲಾಗಿದೆ. ಕೆಲವು ಪಕ್ಷಗಳು ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡುವಂತೆ ಒತ್ತಾಯ ಮಾಡುತ್ತಿರುವ ಬೆನ್ನಲೆ ಒಮರ್ ಹೇಳಿಕೆ ಮಹತ್ವ ಪಡೆದುಕೊಂಡೊದೆ.

ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳನ್ನು ಒಂದುಗೂಡಿಸುವ ಜವಾಬ್ದಾರಿಯನ್ನು ಮಮತಾ ಬ್ಯಾನರ್ಜಿ ಅವರಿಗೆ ನೀಡಲಾಗಿದೆ. ಮುಂದಿನ ವಾರ ಕೋಲ್ಕತ್ತದಲ್ಲಿ ಸಂಯುಕ್ತ ರಂಗ ಒಕ್ಕೂಟದ ಶಕ್ತಿ ಪ್ರದರ್ಶನ ನಡೆಯಲಿದ್ದು, ಬಹುತೇಕ ಎಲ್ಲಾ ಪ್ರಾದೇಶಿಕ ಪಕ್ಷಗಳು ಭಾಗವಹಿಸುವ ನಿರೀಕ್ಷೆಯಿದೆ.
Omar Abdullah,Mamata Banerjee,talk alliance ahead of 2019,but silent on PM candidate and structure of federal front

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ