ಅತಿಥಿ ಉಪನ್ಯಾಸಕರ ಶೀ ನೇಮಕ – ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಜು.28-ರಾಜ್ಯಾದ್ಯಂತ ಅಗತ್ಯವಿರುವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದರು.
ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪನ್ಯಾಸಕರ ಕೊರತೆ ಹಿನ್ನೆಲೆಯಲ್ಲಿ ನಿನ್ನೆ ಯುವರಾಜ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟಿಸಿದ್ದುದು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ ಎಂದು ಹೇಳಿದರು.
ಶೀಘ್ರವೇ ಈ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುವುದು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮತಿ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿಗಳು ಗ್ರೀನ್‍ಸಿಗ್ನಲ್ ಕೊಟ್ಟಿರುವುದರಿಂದ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಶೀಘ್ರವೇ ಉಪನ್ಯಾಸಕರ ಕೊರತೆ ಇರುವ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುವುದು. ರಾಜ್ಯಾದ್ಯಂತ ಯಾವ ಯಾವ ಕಾಲೇಜುಗಳಲ್ಲಿ ಉಪನ್ಯಾಸಕರು ಕಡಿಮೆ ಇರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳಲಾಗುವುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ