ಮುಷ್ಕರಕ್ಕೆಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ – ಕಿಮ್ಸ್ ಸಿದ್ಧ….!

ಹುಬ್ಬಳ್ಳಿ-03
ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ ಮುಷ್ಕರಕ್ಕೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹೊರರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಬರುವ ರೋಗಿಗಳು ಪರದಾಡುತ್ತಿದ್ದಾರೆ. ದೂರದ ಊರುಗಳಿಂದ ಬರುತ್ತಿರುವ ರೋಗಿಗಳು ಪರದಾಡುತ್ತಿದ್ದು, ಕಿಮ್ಸ್ ಗೆ ತೆರಳುತ್ತಿದ್ದಾರೆ.
ಹುಬ್ಬಳ್ಳಿಯ 350 ಕ್ಲಿನಿಕ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ 100 ಕ್ಕೂ ಹೆಚ್ಚು ನರ್ಸಿಂಗ್ ಹೋಂ ಗಳ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಬೆಂಬಲ ನೀಡಿದ್ದು ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್‌ ಹೋಮ್‌ಗಳಲ್ಲಿ ಇಂದು ಹೊರ ರೋಗಿ ವಿಭಾಗದ (ಒಪಿಡಿ) ಸೇವೆ ಸ್ಥಗಿತಗೊಳಿಸಲಾಗಿದೆ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆ ಕಿಮ್ಸ್ ನಲ್ಲಿ ಬೆಳಗಿನಿಂದ ಸಂಜೆ ವರೆಗೆ ವೈದ್ಯಕೀಯ ಸೇವೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ