ದೊಡ್ಡಬಳ್ಳಾಪುರ: ಆಧುನಿಕ ಜಗತ್ತಿನಲ್ಲಿ ನಶಿಸಿ ಹೋಗುತ್ತಿರುವ ಗಾಳಿಪಟ ಹಾರಿಸುವ ಕಲೆಯನ್ನು ಉಳಿಸಿ, ಬೆಳೆಸಿ ಪ್ರೋತ್ಸಾಹಿಸಬೆಕೆಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರು ತಿಳಿಸಿದರು.
ನಗರದ ಭುವನೇಶ್ವರಿ ನಗರದಲ್ಲಿ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಜಾನಪದ ಪರಿಷತ್, ಕನ್ನಡ ಮತ್ತುಸಂಸ್ಕøತಿ ಇಲಾಖೆ ಹಾಗೂ ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘ(ರಿ.) ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ರಾಷ್ಟ್ರ ಮತ್ತು ರಾಜ್ಯಮಟ್ಟದ ಗಾಳಿಪಟ ಉತ್ಸವವನ್ನು ಗಾಳಿಪಟ ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತಿನ ಬಹುತೇಕ ಪ್ರಾಚೀನ ಸಂಸ್ಕøತಿಗಳಲಿ,್ಲ ಸಾಂಸ್ಕøತಿಕ ಘಟಕವಾಗಿ ಉಳಿದು ಬಂದಿರುವ ಗಾಳಿಪಟ ಹಾರಿಸುವ ಕಲೆಯನ್ನು ಉಳಿಸಿ, ಮುಂದಿನ ಪೀಳಿಗೆಯವರಿಗೆ ಈ ಕಲೆಯನ್ನು ಪರಿಚಯಿಸಲು ಹೆಚ್,ಎಲ್.ನಾಗೇಗೌಡರು 1988ರಲ್ಲಿ ಗಾಳಿಪಟ ಉತ್ಸವ ಮತ್ತು ಸ್ಪರ್ಧೆಯನ್ನು ಪ್ರಾರಂಭಿಸಿದರು. ಅದರಂತೆ ಈ ವರ್ಷ ನಮ್ಮ ಜಿಲ್ಲೆಯಲ್ಲಿ ರಾಷ್ಟ್ರ ಮತ್ತು ರಾಜ್ಯಮಟ್ಟದ ಗಾಳಿಪಟ ಉತ್ಸವ-2018 ಮತ್ತು 30ನೇ ವರ್ಷದ ರಾಜ್ಯ ಮಟ್ಟದ ಗಾಳಿಪಟ ಸ್ಪರ್ಧೆ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಗಾಳಿಪಟ ಹಾರಿಸುವುದು ಜಗತ್ತಿನಾದ್ಯಂತ ಮನರಂಜನೆಯ ಕ್ರೀಡೆಯಾಗಿ ಬೆಳೆದು ಬಂದಿದೆ. ಆಷಾಢ ಮಾಸದಲ್ಲಿ ಗಾಳಿಯು ರಭಸವಾಗಿ ಬೀಸುವುದರಿಂದ, ಜನಪದರು ಬಣ್ಣ ಬಣ್ಣದ ವೈವಿಧ್ಯಮಯ ವಿನ್ಯಾಸಗಳ ಪಟಗಳನ್ನು ಹಾರಿಸುವ ಹಬ್ಬವನ್ನು ಪ್ರಾಚೀನ ಕಾಲದಿಂದಲೂ ಆಚರಿಸುತ್ತಾ ಬಂದಿದ್ದಾರೆ. ಗಾಳಿಪಟ ಹಾರಿಸುವ ಕಲೆಯನ್ನು ಉಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ.ತಿಮ್ಮೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ತ.ನ.ಪ್ರಭುದೇವ, ಉಪಾಧ್ಯಕ್ಷ ಜಯಲಕ್ಷ್ಮಿ ನಟರಾಜ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಮತ್ತು ಹೊರ ರಾಜ್ಯಗಳ ಗಾಳಿಪಟ ತಂಡಗಳು, ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಸದಸ್ಯರುಗಳು ಭಾಗವಹಿಸಿದ್ದರು.