ಆ.7ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ

ಬೆಂಗಳೂರು: ಜು.30- ಖಾಸಗಿ ವಾಹನಗಳ ಮಾಲೀಕರ ಶೋಷಣೆಗೆ ಅವಕಾಶ ನೀಡುತ್ತಿರುವ ಮೋಟಾರು ವಾಹನ ತಿದ್ದುಪಡಿ ಮಸೂದೆ 2017ಅನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಆ.7ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ ನಡೆಸಲಾಗುತ್ತಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಪ್ರಕಾಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷತಾ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ರಸ್ತೆ ಸಾರಿಗೆ ರಂಗದಲ್ಲಿರುವ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆ ಬೆಂಬಲ ನೀಡುತ್ತಿದೆ ಎಂದರು.

ಖಾಸಗಿ ವಾಹನಗಳ ಮಾಲೀಕರು ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯದೆ ಜನರಿಗೆ ಸೇವೆ ಒದಗಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಹೇರಿಕೆ, ವಾಹನ ನೋಂದಣಿ ಶುಲ್ಕಗಳು, ಫಿಟ್ನೆಸ್ ಸರ್ಟಿಫಿಕೇಟ್ ಹಾಗೂ ಲೈಸೆನ್ಸ್ ನವೀಕರಣ ಸೇರಿದಂತೆ ಮುಂತಾದ ವಿಷಯಗಳಲ್ಲಿ ಪೆÇಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಕಳೆದ ನಾಲ್ಕು ವರ್ಷದಲ್ಲಿ ಥ್ರಡ್‍ಪಾರ್ಟಿ ಇನ್ಸ್‍ರೆನ್ಷ್ ಪ್ರೀಮಿಯಂನನ್ನು ಶೇ.100ರಷ್ಟು ಹೆಚ್ಚಿಸಲಾಗಿದೆ. ಇದನ್ನೆಲ್ಲಾ ವಿರೋಧಿಸಿ ಮುಷ್ಕರ ನಡೆಸುತ್ತಿರುವುದಾಗಿ ಅವರು ಹೇಳಿದರು.

CENTRE OF INDIAN TRADE UNIONS ,K PRAKASH 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ