
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚಾರ ಮಾಡುವ ಮೂಲಕ ಸಾರಿಗೆ ಸಂಸ್ಥೆಯ ಸಮಸ್ಯೆಗಳನ್ನು ಆಲಿಸುವುದರೊಂದಿಗೆ ಪ್ರಯಾಣಿಕರ ಗಮನ ಸೆಳೆದರು. ಹುಬ್ಬಳ್ಳಿಯ ಸಿಬಿಟಿಯಿಂದ ಕಿತ್ತೂರು ರಾಣೆ ಚೆನ್ನಮ್ಮ ವೃತ್ತವರಿಗೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಟಿಕೇಟ್ ಪಡೆದು, ಪ್ರಯಾಣ ಮಾಡಿದ್ರು. ಬಸ್ ಚಾಲಕರು ಹಾಗೂ ನಿರ್ವಾಹಕರ ಸಮಸ್ಯೆ ಹಾಗೂ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇನ್ನು ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸ್ವಚ್ಛತೆ ಹಾಗೂ ಅವಳ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ತಾಕೀತು ಮಾಡಿದ್ರು.