ಪ್ರತ್ಯೇಕ ರಾಜ್ಯದ ಬಿಜೆಪಿ ತಂತ್ರ ಫಲಿಸುವುದಿಲ್ಲ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ಜು.31-ಪ್ರತ್ಯೇಕ ರಾಜ್ಯದ ಕೂಗಿನ ವಿಚಾರದಲ್ಲಿ ಬಿಜೆಪಿಯವರು ನಡೆಸುವ ತಂತ್ರ ಫಲಿಸುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರೈತರ ಸಾಲ ಮನ್ನಾ ಮಾಡಲು ಬಿಜೆಪಿಯವರಿಂದ ಆಗಲಿಲ್ಲ ಎಂದು ಟೀಕಿಸಿದರು.

ರೈತರ ಸಾಲ ಮನ್ನಾ ಮಾಡಿರುವುದನ್ನು ಸಹಿಸದೆ ಬಿಜೆಪಿ ರೈತರ ಹೆಸರಿನಲ್ಲಿ ಪಾದಯಾತ್ರೆ ಮಾಡಿದವು. ಪ್ರತ್ಯೇಕ ರಾಜ್ಯದ ಕೂಗನ್ನು ನಾವು ಖಂಡಿಸುತ್ತೇವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜನಪ್ರಿಯ ಕಾರ್ಯಕ್ರಮಗಳು ದೀರ್ಘಕಾಲ ಉಳಿಯುತ್ತವೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 15 ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, 15 ದಿನದಲ್ಲಿ ಪತನವಾಗುತ್ತದೋ ಕಾದು ನೋಡಿ ಎಂದು ತಿರುಗೇಟು ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ