ಆಕ್ರಮಣಕಾರಿಯಾಗಿ ವಿರಾಟ್ ಕೊಹ್ಲಿಯನ್ನು ಎದುರಿಸಿ: ಇಂಗ್ಲೆಂಡ್‌ಗೆ ಮಾಜಿ ನಾಯಕನ ಸಲಹೆ

ಬರ್ಮಿಂಗ್ಹ್ಯಾಮ್: ಆಕ್ರಮಣಕಾರಿ ಆಟದ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಎದುರಿಸಿ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾಘನ್ ತಂಡದ ಆಟಗಾರರಿಗೆ ಸಲಹೆ ನೀಡಿದ್ದಾರೆ.
ಆಗಸ್ಟ್ 1ರಿಂದ ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವೆ ಐತಿಹಾಸಿಕ ಟೆಸ್ಟ್ ಸರಣಿ ನಡೆಯಲಿದ್ದು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವನ್ನು ಎದುರಿಸಬೇಕಾದರೆ ನೀವು(ಇಂಗ್ಲೆಂಡ್ ಆಟಗಾರರಿಗೆ) ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಸವಾಲಾಗಬೇಕಿದೆ ಎಂದು ಹೇಳಿದ್ದಾರೆ.
ಇಂಗ್ಲೆಂಡ್ ತಂಡದ ಖ್ಯಾತ ಆಟಗಾರ ಅಲಿಸ್ಟರ್ ಕುಕ್ ರೀತಿಯ ಸ್ಥಿರ ಪ್ರದರ್ಶನವನ್ನು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ತೋರಬೇಕಿದೆ. ಇನ್ನು ಟೀಂ ಇಂಡಿಯಾ ಆಟಗಾರರಿಗೆ ಸವಾಲಾಗಲು ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆ್ಯಂಡ್ರೂಸನ್ ವೇಗಿಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಪಂದ್ಯ ಆಗಸ್ಟ್ 1ರಿಂದ ಪ್ರಾರಂಭವಾಗಲಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ