
ನವದೆಹಲಿ: ಆ:1: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ ಇಂದು ರಿಲೀಫ್ ನೀಡಿದೆ.
ಬಂಧನದಿಂದ ರಕ್ಷಣೆ ನೀಡಲು ಅವರಿಗೆ ಮಂಜೂರು ಮಾಡಲಾಗಿದ್ದ ಮಧ್ಯಂತರ ರಕ್ಷಣೆ ಅವಧಿಯನ್ನು ಸೆಪ್ಟೆಂಬರ್ 28ರವರೆಗೆ ಹೈಕೋರ್ಟ್ ವಿಸ್ತರಿಸಿದೆ.
ಈ ಸಂಬಂಧ ನಾಲ್ಕು ವಾರಗಳಲ್ಲಿ ಪ್ರತ್ಯುತ್ತರ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ನ್ಯಾಯಮೂರ್ತಿ ಎ.ಕೆ.ಪಾಠಕ್ ಇದೇ ವೇಳೆ ಸೂಚನೆ ನೀಡಿದರು.
ವಿಚಾರಣೆ ಸಂದರ್ಭದಲ್ಲಿ ಈ ಪ್ರಕರಣದ ಸಂಬಂಧ ತಾನು ಈಗಾಗಲೇ ತನ್ನ ಪ್ರತ್ಯುತ್ತರ ಸಲ್ಲಿಸಿರುವುದಾಗಿ ಕೇಂದ್ರೀಯ ತನಿಖಾ ದಳ(ಸಿಬಿಐ) ತಿಳಿಸಿತು.
ಈ ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 28ರಂದು ನಡೆಯಲಿದೆ.