ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
August 1, 2018VDರಾಷ್ಟ್ರೀಯComments Off on ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
Seen By: 73
ನವದೆಹಲಿ: ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆಗೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.ಅ ಅರ್ಜಿ ಸಂಬಂಧ ವಾದ ವಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನಿಕ ಪೀಠ, ಏಳು ದಿನಗಳೊಳಗೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.ವಿಚಾರಣೆ ಮುಗಿದಿದ್ದು, ತೀರ್ಪು ಕಾಯ್ದಿರಿಸಲಾಗಿದೆ. ವಾದ ಪ್ರತಿವಾದ ಮಂಡಿಸಿದ ವಕೀಲರಿಗೆ ಏಳು ದಿನಗಳೊಳಗೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಾಂವಿಧಾನಿಕ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ಎ, ಎಂ, ಖನ್ವೀಲ್ ಕರ್, ಡಿ. ವೈ. ಚಂದ್ರಚೂಡ್ ಹಾಗೂ ಇಂದು ಮಲ್ಹೋತ್ರಾ ಹೇಳಿದ್ದಾರೆ.ಭಾರತದ ಯುವ ವಕೀಲರ ಸಂಘ ಮತಿತ್ತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದ್ದು, ಮಹಿಳೆಯರಿಗೆ ಅವಕಾಶ ನಿರಾಕರಣೆ ಪ್ರಜಾಪ್ರಭುತ್ವದ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ನಿನ್ನೆ ಹೇಳಿಕೆ ನೀಡಿತ್ತು.ಜುಲೈ 18 ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂದು ಹೇಳಿಕೆ ನೀಡಿತ್ತು. ನಂತರ ಕೇರಳ ಸರ್ಕಾರ ಕೂಡಾ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಂಡಿತ್ತು.ಶಬರಿಮಲೆಗೆ ಮಹಿಳೆಯರ ಪ್ರವೇಶ ನಿರಾಕರಣೆ ಮೂಲಕ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಐದು ಪ್ರಶ್ನೆಗಳನ್ನು ರೂಪಿಸಿ ಸುಪ್ರೀಂಕೋರ್ಟ್ ಕಳೆದ ವರ್ಷ ಅಕ್ಟೋಬರ್ 13 ರಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.
Seen By: 59 ಕಾಸರಗೋಡು: ಶಬರಿಮಲೆ ಅಭಿವೃದ್ಧಿಗೆ ಕೇಂದ್ರ ಸರಕಾರವು ಬಿಡುಗಡೆಗೊಳಿಸಿದ ಅನುದಾನವನ್ನು ಕೇರಳದ ಎಡರಂಗ ಸರಕಾರವು ಸದ್ಬಳಕೆ ಮಾಡಿಲ್ಲ ಎಂದು ಬಿಜೆಪಿ ಕೇರಳ ರಾಜ್ಯ ಮಾಜಿ [more]
Seen By: 58 ತಿರುವನಂತಪುರ: ಮಲೆಯಾಳಂ ತುಳಂ ಮಾಸದ ಹಿನ್ನೆಲೆ ಕೇರಳದ ಪ್ರಸಿದ್ಧ ಶಬರಿಮಲೆ ದೇವಾಲಯದಲ್ಲಿ ಶುಕ್ರವಾರ(ಅ. 16)ದಿಂದ 5 ದಿನ ಭಕ್ತರ ದರ್ಶನಕ್ಕೆ ತಿರುವಾಂಕೂರು ದೇವಸ್ವಂ [more]