
ಬೆಂಗಳೂರು,ಆ.3- ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪಕ್ಷದ ಅಧ್ಯಕ್ಷ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಲು ಇಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡು ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಇಂದು ಸಂಜೆ 5 ಗಂಟೆಗೆ ಆಸ್ಪತ್ರೆಗೆ ಭೇಟಿ ನೀಡಲಿರುವ ದೇವೇಗೌಡರು ಕರುಣಾನಿಧಿ ಅವರ ಆರೋಗ್ಯ ವಿಚಾರಿಸಲಿದ್ದಾರೆ. ಜೊತೆಗೆ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಕೂಡ ತೆರಳಲಿದ್ದಾರೆ.
ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಕರುಣಾನಿಧಿ ಅವರ ಆರೋಗ್ಯ ಸದ್ಯದ ಮಟ್ಟಿಗೆ ಸ್ಥಿರವಾಗಿದೆ. ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.