ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾಪೆರ್Çೀರೇಟ್ ಸಂಸ್ಥೆಗಳು ಹೆಚ್ಚಿನ ಬಂಡವಾಳ ಹೂಡಿಕೆಗೆ ಸರ್ಕಾರ ಸಹಕಾರ: ಸಿಎಂ

 

ಬೆಂಗಳೂರು, ಆ.3- ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾಪೆರ್Çೀರೇಟ್ ಸಂಸ್ಥೆಗಳು ಹೆಚ್ಚಿನ ಬಂಡವಾಳ ಹೂಡಿಕೆ ಮಾಡಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ಖಾಸಗಿ ಹೋಟೆಲ್‍ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಉದ್ಯಮಿಗಳ ಜತೆ ಉಪಹಾರ ಕೂಟ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ತಿಂಗಳಿನಲ್ಲಿ ಬೆಂಗಳೂರು ಟೆಕ್ ಸಮ್ಮೇಳನ ಆಯೋಜಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಐಟಿ-ಬಿಟಿ ಕ್ಷೇತ್ರದ ಉದ್ಯಮಿಗಳ ಜತೆ ಸಮಾಲೋಚನೆ ನಡೆಸಿದ್ದೇವೆ. ಅವರಿಂದ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದರು.
ಇನ್ನೂ ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಉದ್ಯಮಿಗಳು ತಮ್ಮ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಅವುಗಳಿಗೆ ಹೇಗೆ ಸ್ಪಂದಿಸಬೇಕು ಎಂಬುದರ ಬಗ್ಗೆಯೂ ಸಲಹೆಗಳನ್ನು ನೀಡಿದ್ದಾರೆ.
ನಮ್ಮ ಮೊದಲ ಆದ್ಯತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವುದು. ಈಗಾಗಲೇ ಬಹಳಷ್ಟು ಕಂಪೆನಿಗಳು ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆ ಮಾಡಿವೆ. ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಆರಂಭಿಸಲು ಸರ್ಕಾರ ಹೆಚ್ಚಿನ ಪೆÇ್ರೀ ನೀಡುತ್ತಿದೆ. ಇದಕ್ಕೆ ಪೂರಕವಾಗಿ ಬಜೆಟ್‍ನಲ್ಲಿ ಹಲವಾರು ಘೋಷಣೆಗಳನ್ನು ಮಾಡಲಾಗಿದೆ
ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಪ್ರಮಾಣದ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡಲಾಗುವುದು. ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಉದ್ಯಮಗಳನ್ನು ಆರಂಭಿಸಲು ಮನವಿ ಮಾಡಿಕೊಳ್ಳಲಾಗಿದೆ. ಕಾಪೆರ್Çೀರೇಟ್ ಸಂಸ್ಥೆಗಳು ಅದಕ್ಕೆ ಸ್ಪಂದಿಸಿವೆ ಎಂದು ಕುಮಾರಸ್ವಾಮಿ ಹೇಳಿದರು.
ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕೇರಳ ಮತ್ತು ಕರ್ನಾಟಕ ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕುರಿತು ರಾಜ್ಯ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅದು ಈಗಾಗಲೇ ಮುಗಿದು ಹೋಗಿರುವ ಅಧ್ಯಾಯ. ಆದರೆ, ನಮ್ಮ ಸರ್ಕಾರದಲ್ಲಿ ಮತ್ತೆ ಯಾವ ಕಾರಣಕ್ಕೆ ಪ್ರಸ್ತಾಪವಾಗುತ್ತಿದೆ ಎಂಬುದು ಗೊತ್ತಿಲ್ಲ ಎಂದು ಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರ ಎರಡನೆ ಮತ್ತು ಮೂರನೇ ಹಂತದ ನಗರಗಳಲ್ಲಿ ಉದ್ಯಮ ಸ್ಥಾಪನೆಯ ಮೂಲಕ ಗ್ರಾಮೀಣ ಯುವಕರಿಗೂ ಉದ್ಯೋಗ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ. ಅಲ್ಲದೆ, ಕೌಶಲ್ಯ ತರಬೇತಿಗೆ ಒತ್ತು ನೀಡಲಿದ್ದು, ಈ ಬಾರಿಯ ಆಯವ್ಯಯದಲ್ಲಿ ಇದಕ್ಕಾಗಿ 500 ಕೋಟಿ ಮೀಸಲಿಡಲಾಗಿದೆ.
ಕೈಗಾರಿಕೆಗಳ ಸ್ಥಾಪನೆಗೆ ಇರುವ ತೊಡಕುಗಳ ನಿವಾರಣೆಗೆ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ಘಟಕ ಸ್ಥಾಯಿಸಲಾಗುವುದು ಎಂದ ಅವರು, ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿರುವಂತೆ ಚೀನಾದೊಂದಿಗೆ ಆರೋಗ್ಯಕರ ಸ್ಪರ್ಧೆ ಎಂಬ ಯೋಜನೆಯಡಿ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‍ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ವಿವರಿಸಿದರು.
ಬೀದರ್‍ನಲ್ಲಿ ಕೃಷಿಗೆ ಪೂರಕ ಯಂತ್ರೋಪಕರಣ ತಯಾರಿಕೆ, ಕಲಬುರ್ಗಿಯಲ್ಲಿ ಸೌರವಿದ್ಯುತ್ ಉಪಕರಣಗಳ ಉದ್ಯಮ, ಕೊಪ್ಪಳದಲ್ಲಿ ಆಟಿಕೆಗಳ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮ, ಚಿತ್ರದಲ್ಲಿ ಎಲ್‍ಇಡಿ ಕಾರ್ಖಾನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‍ಗಳನ್ನು ಸ್ಥಾಪಿಸುವ ಮೂಲಕ ಎಲ್ಲಾ ರೀತಿಯ ಉದ್ಯಮಕ್ಕೂ ಪೆÇ್ರೀ ನೀಡಲಾಗುವುದು ಎಂದರು.
ಕರ್ನಾಟಕ ಇನೋವೇಟಿವ್ ಹಬ್ ಎಂಬ ಹೆಸರುಗಳಿಸಿದೆ. ಹಾಗಾಗಿ ಈ ವಲಯಕ್ಕೆ ಬೆಂಬಲ ನೀಡಲು ಮತ್ತು ಇಲ್ಲಿರುವ ಸಮಸ್ಯೆಗಳನ್ನು ನಿವಾರಿಸಲು ಇನೋವೇಟಿವ್ ಅಥಾರಿಟಿಯನ್ನು ಸ್ಥಾಪಿಸುವ ಕುರಿತಂತೆ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ