ಬೆಂಗಳೂರು, ಆ.3- ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಆಷಾಢದ ನಂತರ ಸಂಪುಟ ವಿಸ್ತರಣೆಯಾಗಲಿದೆ. ಸಚಿವಾಕಾಂಕ್ಷಿಗಳಿಗೆ ಶುಭಸುದ್ದಿ ಸಿಗಲಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಸಂಬಂಧ ಹೈಕಮಾಂಡ್ ನಿರ್ಧಾರ ಮಾಡಲಿದೆ. ಮಂಡ್ಯ, ಹಾಸನ, ಮೈಸೂರು ಮುಂತಾದ ಕಡೆ ಮೈತ್ರಿಗೆ ನಮ್ಮ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳಲಿದೆಯೋ ಅದಕ್ಕೆ ನಾವೆಲ್ಲ ಬದ್ಧರಾಗಿರಬೇಕಾಗುತ್ತದೆ. ಪರ-ವಿರೋಧದ ಪ್ರಶ್ನೆ ಬರುವುದಿಲ್ಲ ಎಂದು ಅವರು ಹೇಳಿದರು.