ಬೆಂಗಳೂರು, ಆ.3- ಉತ್ತರ ಕರ್ನಾಟಕದ ಜನರು ಯಾವುದೇ ಕಾರಣಕ್ಕೂ ಪ್ರತ್ಯೇಕ ರಾಜ್ಯ ಬೇಕೆಂದು ಬೇಡುವುದಿಲ್ಲ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು.
ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸಂಘಟನೆಗಾಗಿ ರಾಜ್ಯವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಬಜೆಟ್ನಲ್ಲಿ ಸಮಾನಂತರವಿದೆ. ತಾರತಮ್ಯ ಮಾಡಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ಮಾಡುತ್ತಿಲ್ಲ. ರಾಜ್ಯದಲ್ಲಿ ಸಮನಾಂತರವಾದ ಕೆಲಸಗಳು ನಡೆಯುತ್ತಿವೆ ಸಮರ್ಥಿಸಿಕೊಂಡರು.