ಸರ್ಕಾರಿ ಶಾಲೆ ಉಳಿಸಲು ಮಿಸ್ಡ್ ಕಾಲ್ ಅಭಿಯಾನ

 

ಬೆಂಗಳೂರು,ಆ.3-ಸರ್ಕಾರಿ ಶಾಲೆ ಉಳಿಸಿ ಆಂದೋಲನದ ಹೊಸ ರಾಜ್ಯ ಶಿಕ್ಷಣ ನೀತಿ ರೂಪಿಸುವಂತೆ ಒತ್ತಾಯಿಸಿ ಮಿಸ್ಡ್ ಕಾಲ್ ಅಭಿಯಾನ ಕೈಗೊಂಡಿರುವುದಾಗಿ ಶಿಕ್ಷಣ ಪ್ರೇಮಿ ಅನಿಲ್ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕಾಗಿ ಜನರಿಂದ ಉತ್ತಮ ಬೆಂಬಲ ದೊರಕಿದ್ದು ಈಗಾಗಲೇ 1.5 ಲಕ್ಷಕ್ಕೂ ಹೆಚ್ಚು ಜನರು 7676444225ಗೆ ಮಿಸ್ಡ್ ಕಾಲ್ ಕೊಡುವುದರ ಮೂಲಕ ಹೆಚ್ಚು ಜನರು ಬೆಂಬಲ ನೀಡಿರುವುದಾಗಿ ತಿಳಿಸಿದರು.
ಈಗಾಗಲೇ ಒಂದು ಸರ್ಕಾರಿ ಶಾಲೆಯನ್ನುದತ್ತು ಪಡೆದು ಎರಡು ಕೋಟಿ ವೆಚ್ಚದಲ್ಲಿ ಅಭಿವೃದ್ದಿಗೊಳಿಸಿ 30 ಮಕ್ಕಳಿದ್ದ ದೊಡ್ಡಲಕಾಡು ಶಾಲೆಗೆ ಈಗ 500 ಮಕ್ಕಳಿಂದ ತುಂಬಿದೆ. ಇದೇ ರೀತಿ ರಾಜ್ಯಾದ್ಯಂತ ಪ್ರವಾಸ ಮಾಡಿ ಸರ್ಕಾರಿ ಶಾಲೆಗಳ ಪರಿಸ್ಥಿತಿ ಅಧ್ಯಯನ ಮಾಡಿ ಅನೇಕ ಪೆÇೀಷಕರೊಂದಿಗೆ ಚರ್ಚಿಸಿದ ಮೇಲೆ ನಾವು ಹೊಸ ರಾಜ್ಯ ಶಿಕ್ಷಣ ನೀತಿ ಬೇಕೆಂಬ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದೇವೆ ಎಂದು ತಿಳಿಸಿದರು.
ಅಭಿಯಾನ ತಂಡವು ಸೆ.8ರಂದು ಸಾವಿರಾರು ಪೆÇೀಷಕರು, ಯುವಕರು ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮುಖ್ಯಮಂತ್ರಿಗಳಿಗೆ ಭೇಟಿಯಾಗಿ ಅವರಿಗೆ ಹೊಸ ರಾಜ್ಯ ಶಿಕ್ಷಣ ನೀತಿ ರೂಪಿಸುವಂತೆ ಮನವಿ ಕೊಡಲಿದ್ದಾರೆ ಎಂದು ತಿಳಿಸಿದರು.
ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಹೊಸ ಶಿಕ್ಷಣ ನೀತಿಯನ್ನು ರೂಪಿಸುವಂತೆ ಒತ್ತಾಯಿಸಲು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಶಿಕ್ಷಣ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದವಾಗಿದ್ದೇವೆ ಎಂದು ತಿಳಿಸಿದರು.
ಸರ್ಕಾರಿ ಶಾಲೆ ಉಳಿಸಿ ಆಂದೋಲನಕ್ಕೆ ಬೆಂಬಲ ಕೊಡಲು 7676444225 ಸಂಖ್ಯೆಗೆ ಮಿಸ್ ಕಾಲ್ ಕೋಡಬೇಕೆಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ