
ಬರ್ಮಿಂಗ್ ಹ್ಯಾಮ್: ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಆಂಗ್ಲರ ನೆಲದಲ್ಲಿ ಚೊಚ್ಚಲ ಟೆಸ್ಟ್ ಶತಕದ ಸಾಧನೆ ಮಾಡಿದ್ದಾರೆ.
ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಭರ್ಜರಿ ಶತಕ(149) ಬಾರಿಸುವ ಮೂಲಕ ಕುಸಿದ ಭಾರತಕ್ಕೆ ಆಸರೆಯಾಗಿದ್ದಾರೆ.
ವಿರಾಟ್ ಕೊಹ್ಲಿ ಅವರು ಶತಕ ಸಿಡಿಸಿದ ಬಳಿಕ ತಮ್ಮ ಕೊರಳಲ್ಲಿದ್ದ ಚಿನ್ನದ ಮಾಲೆಗೆ ಮುತ್ತಿಕ್ಕುತ್ತಾ ಪತ್ನಿ ಅನುಷ್ಕಾ ಶರ್ಮಾ ಮೇಲಿನ ಪ್ರೀತಿಯನ್ನು ಪ್ರದರ್ಶಿಸಿದರು.
ಇದು ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಸಿಡಿದ 22ನೇ ಟೆಸ್ಟ್ ಹಾಗೂ ಒಟ್ಟಾರೆಯಾಗಿ 57ನೇ ಅಂತರಾಷ್ಟ್ರೀಯ ಶತಕವಾಗಿದೆ.