
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೀಂ ಇಂಡಿಯಾದ ವೇಗಿ ಇಶಾಂತ್ ಶರ್ಮಾಗೆ ದಂಡ ವಿಧಿಸಿದೆ.
ಮೊದಲ ಟೆಸ್ಟ್ ಪಂದ್ಯ ಎರಡನೇ ಇನ್ನಿಂಗ್ಸ್ ನಲ್ಲಿ ಇಶಾಂತ್ ಐದು ವಿಕೆಟ್ ಪಡೆದಿದ್ದರು. ಆದರೆ ಇಂಗ್ಲೆಂಡ್ ಬ್ಯಾಟ್ಸ್ ಮನ್ ಡೇವಿಡ್ ಮಲನ್ ವಿಕೆಟ್ ಪಡೆದ ಇಶಾಂತ್ ಉದ್ರೇಕಗೊಳಿಸುವ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು. ಇದಕ್ಕೆ ಐಸಿಸಿ ಪಂದ್ಯ ಶುಲ್ಕದ ಶೇಕಡಾ 15ರಷ್ಟು ಮತ್ತು ಒಂದು ಡಿಮೆರಿಟ್ ಅಂಕವನ್ನು ಹೇರಿದೆ.
ತಮ್ಮ ಉದ್ರೇಕ ವರ್ತನೆಯನ್ನು ಸ್ವತಃ ಇಶಾಂತ್ ಶರ್ಮಾ ಅವರೇ ಒಪ್ಪಿಕೊಂಡಿದ್ದಾರೆ.