
ಬರ್ಮಿಂಗ್ ಹ್ಯಾಮ್: ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸುವ ಮೂಲಕ 1000ದ ಪಂದ್ಯ ಗೆದ್ದ ಸಾಧನೆ ಮಾಡಿದೆ.
ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಪ್ರವಾಸಿ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ನಾಯಕ ಜೋ ರೂಟ್(80) ಹಾಗೂ ಜಾನಿ ಬೌರ್‌ಸ್ಟೋವ್ (70) ಆಕರ್ಷಕ ಅರ್ಧಶತಕಗಳ ಹೊರತಾಗಿಯೂ ಇಂಗ್ಲೆಂಡ್ 287 ರನ್ ಗಳಿಗೆ ಆಲೌಟ್ ಆಗಿತ್ತು.
ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 287 ರನ್ ಗಳಿಗೆ ಆಲೌಟ್ ಆಗಿತ್ತು. 13 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದ ಇಂಗ್ಲೆಂಡ್ ತಂಡವನ್ನು 180 ರನ್ ಗಳಿಗೆ ಆಲೌಟ್ ಮಾಡಲಾಗಿತ್ತು. ಇದರೊಂದಿಗೆ ಟೀಂ ಇಂಡಿಯಾ ಗೆಲ್ಲಲು 194 ರನ್ ಗಳ ಗುರಿ ಬೆನ್ನಟ್ಟಬೇಕಿತ್ತು.
194 ರನ್ ಗಳ ಗುರಿಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀ ಇಂಡಿಯಾ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದಾಗಿ 162 ರನ್ ಗಳಿಗೆ ಆಲೌಟ್ ಆಗಿದ್ದು 31 ರನ್ ಗಳಿಂದ ಸೋಲು ಕಂಡಿದೆ.