ಜೆಡಿಎಸ್ ನೂತನ ರಾಜ್ಯಾಧ್ಯಕ್ಷರು ಹೇಳಿದ್ದೇನು…?

ಬೆಂಗಳೂರು:ಆ-5: ದೊಡ್ಡವರು ದೊಡ್ಡ ಜವಾಬ್ದಾರಿಯನ್ನು ನನ್ನ ಮೇಲೆ ಹೊರಿಸಿದ್ದಾರೆ ಅದನ್ನ ಎಲ್ಲರ ಜೊತೆ ಸೇರಿ ನಿಭಾಯಿಸುತ್ತೇನೆ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಜೆಡಿಎಸ್​ ಪಕ್ಷದ ಸಭೆಯಲ್ಲಿ ಜೆಡಿಎಸ್​ ಮಾಜಿ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್​ ಅವರಿಗೆ ಸಾಂಕೇತಿಕವಾಗಿ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿದ ಹೆಚ್ ವಿಶ್ವನಾಥ್, ದೊಡ್ಡವರು ನನಗೆ ಉತ್ತಮ ಅವಕಾಶ ನೀಡಿದ್ದಾರೆ. ದೊಡ್ಡ ಜವಾಬ್ದಾರಿಯನ್ನು ವಹಿಸಿದ್ದಾರೆ. ಅವರಿಗೆ ನಾನು ಆಭಾರಿಯಾಗಿದ್ದೇನೆ. ಈ ದೊಡ್ಡ ಜವಾಬ್ದಾರಿಯನ್ನು ಎಲ್ಲರ ಜೊತೆ ಸೇರಿ ನಿಭಾಯಿಸುತ್ತೇನೆ ಎಂದರು.

ನಮ್ಮ ಮುಂದೆ ಇರುವುದು ನಮ್ಮ ಸರ್ಕಾರದ ತೀರ್ಮಾನ. ಸರ್ಕಾರದ ತೀರ್ಮಾನಗಳನ್ನ‌ ಜನರಿಗೆ ಅರ್ಥೈಸುವ ಕೆಲಸ ಮಾಡುತ್ತೇನೆ. ಜನರಿಗೆ ಸತ್ಯ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇನ್ನು ಲೋಕಸಭಾ ಚುನಾವಣೆಯಲ್ಲಿ ಅತಿ‌ಹೆಚ್ಚು ಸ್ಥಾನ ಗಳಿಸಬೇಕಿದೆ. ಆ ನಿಟ್ಟಿನಲ್ಲಿ ಹೆಚ್ಚು ಕ್ರೀಯಾಶೀಲ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಜಾತಿ,ಧರ್ಮದ ಯುವಕ,ಯುವತಿಯರಿಗೆ ಪಕ್ಷದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಕುರಿತು ಹಾಗೂ ನಮ್ಮ ಜೊತೆಯಲ್ಲೇ ಕರೆದೊಯ್ಯುವ ಕೆಲಸ ಮಾಡುತ್ತೇವೆ ಎಂದರು.

ಅಲ್ಲದೇ ಕೊನೆಯ ಉಸಿರಿರುವರೆಗೆ ಪಕ್ಷಕ್ಕಾಗಿ ದುಡಿಯುತ್ತೇನೆ. ಪಕ್ಷದ ಜೊತೆಯಲ್ಲೇ ನಾನು ಸಾಗುತ್ತೇನೆ ಎಂದು ನೂತನ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿದ್ದಾರೆ.
H Vishwanath,JDS,New State President,H D Devegowda

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ