ಪರೀಕ್ಷೆ ವಂಚತರಿಗೆ ಮತ್ತೊಂದು ಅವಕಾಶ ನೀಡುವುದಾಗಿ ಸಿಎಂ ಭರವಸೆ

ಬೆಂಗಳೂರು:ಆ-5:ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರಾಲಿನ ದೋಷದಿಂದಾಗಿ ವಿಳಂಬವಾಗಿ ಬಂದ ರೈಲಿನಿಂದ ಪೊಲೀಸ್‌ ನೇಮಕಾತಿ ಪರೀಕ್ಷೆಯಿಂದ ವಂಚಿತರಾಗಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ರೈಲು ತಡವಾಗಿ ಬೆಂಗಳೂರು ತಲುಪಿದ ಕಾರಣ ಡಿ ಆರ್ ಪರೀಕ್ಷೆ ಬರೆಯಲು ಆಗದವರಿಗೆ ಮರುಪರೀಕ್ಷೆಗೆ ಅನುವು ಮಾಡಿಕೊಡುತ್ತೇವೆ. ಹುಬ್ಬಳ್ಳಿ ಪರೀಕ್ಷಾ ಕೇಂದ್ರಕ್ಕೂ ಅವಕಾಶ ಮಾಡುತ್ತೇವೆ. ಮುಂದೆ ಈ ರೀತಿಯ ಘಟನೆಗಳಾಗದಂತೆ ನಿಗಾ ವಹಿಸಲು ರೈಲ್ವೆ ಸಚಿವರ ಜೊತೆಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ನಾಳೆ, ನಾಡಿದ್ದು ಮರು ದಿನಾಂಕ ಪ್ರಕಟ ಮಾಡಲು ತಿಳಿಸಿದ್ದೇನೆ. ಡಿಆರ್ ಪರೀಕ್ಷೆ ಬಗ್ಗೆ ಪತ್ರಿಕೆಯಲ್ಲಿ ದಿನಾಂಕ ಪ್ರಕಟಿಸಲಾಗುವುದು. ಯಾರು ಪರೀಕ್ಷೆಯಿಂದ ವಂಚಿತರಾಗಿದ್ದಾರೋ ಅವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಡಿಆರ್ ಪರೀಕ್ಷೆಗೆ ಹೋಗಬೇಕಿದ್ದ 2,000ಕ್ಕೂ ಹೆಚ್ಚು ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನಲೆಯಲ್ಲಿ ರೈಲಿನಿಂದಾದ ಎಡವಟ್ಟಿಗೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಂದು ಅವಕಾಶ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

DR Exam,CM H D Kumaraswamy,Train Problem

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ