ಬೆಂಗಳೂರು:ಆ-೫: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದು, ನಮ್ಮ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ಹೆಚ್ ವಿಶ್ವನಾಥ್ ರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಸಾಂಕೇತಿಕವಾಗಿ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.
ಪಕ್ಷದ ಘಟಕಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಹಾಗಾಗಿ ಮುಂದಿನ ದಿನಗಳಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ಮಾಡಲಾಗುವುದು. ರಾಜ್ಯ ಪದಾಧಿಕಾರಿಗಳಲ್ಲಿ ಯುವಕರಿಗೆ, ಹಿಂದುಳಿದ ವರ್ಗದ ಜನರಿಗೆ, ಮುಸ್ಲಿಂ ಯುವಕರಿಗೆ ಆದ್ಯತೆ ನೀಡಲಾಗುವುದು ದೇವೇಗೌಡರು ಇದೇವೇಳೆ ತಿಳಿಸಿದ್ದಾರೆ.
ಇನ್ನು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತದೆ. ರಾಜ್ಯ ಮಟ್ಟದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
H Vishwanath,JDS,New State President,H D Devegowda