ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

 

ಬೆಂಗಳೂರು, ಆ.5-ರಾಣಿ ಚೆನ್ನಮ್ಮ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರೈಲು ವಿಳಂಬದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾದ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎಸ್.ರಾಜು ಅವರಿಗೆ ನಿರ್ದೇಶನ ನೀಡಿದ್ದಾರೆ.
ರೈಲು ತಡವಾಗಿ ಬಂದಿದ್ದರಿಂದ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳು ಗಾಬರಿಯಾಗಬೇಕಿಲ್ಲ. ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆ ತಕ್ಷಣವೇ ಅಧಿಕಾರಿಗಳು ದಿನಾಂಕ ಪ್ರಕಟಿಸಲು ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ರೈಲು ವಿಳಂಬವಾಗಿರುವ ಸಂಬಂಧ ರೈಲ್ವೆ ಸಚಿವರ ಗಮನಸೆಳೆದು ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಲು ಮನವಿ ಮಾಡಲಾಗುವುದು. ಹುಬ್ಬಳ್ಳಿಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸುವ ಕುರಿತು ಸಹ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.
ರಾಜ್ಯ ಪೆÇಲೀಸ್ ಮಹಾನಿರ್ದೇಶಕರು ನೇಮಕಾತಿ ಮತ್ತು ತರಬೇತಿ ವಿಭಾಗದ ಎಡಿಜಿಪಿ ಅವರಿಗೆ ಸೂಚನೆ ನೀಡಿದ್ದು, ಶೀಘ್ರವೇ ಮುಂದಿನ ಪರೀಕ್ಷಾ ದಿನಾಂಕ ಪ್ರಕಟಿಟವಾಗಲಿದೆ ಎಂದು ಮುಖ್ಯಮಂತ್ರಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ