
ಬೆಂಗಳೂರು, ಆ.5-ವಿವಾಹಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಗಂಗಮ್ಮನಗುಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ವೃತ್ತಿಯಲ್ಲಿ ಕಾರು ಚಾಲಕನಾಗಿರುವ ವೆಂಕಟೇಶ (46) ಬಂಧಿತ ಆರೋಪಿ.
ಮದುವೆಯಾಗಿದ್ದ 35 ವರ್ಷದ ಮಹಿಳೆಯನ್ನು ಹೋದೆಡೆಯಲ್ಲೆಲ್ಲಾ ಹಿಂಬಾಲಿಸುತ್ತಾ ಕಿರುಕುಳ ನೀಡುತ್ತಿದ್ದ ಈತ, ಇತ್ತೀಚೆಗೆ ಇವರ ಮನೆಗೆ ಹೋಗಿ ಅಸಭ್ಯವಾಗಿ ವರ್ತಿಸಿದ್ದರಿಂದ ಮಹಿಳೆ ಗಂಗಮ್ಮನಗುಡಿ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೆÇಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.