ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಕೊಲೆ ಮಾಡಿ ಶವಗಳನ್ನು ಹೂತು ಹಾಕಿ ಪರಾರಿ

 

ಬೆಂಗಳೂರು, ಆ.5- ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಕೊಲೆ ಮಾಡಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಗಳು ನೀಡಿರುವ ಹೇಳಿಕೆಯ ಆಧಾರದ ಮೇಲೆ ದಕ್ಷಿಣ ವಿಭಾಗದ ಪೆÇಲೀಸರು, ತೀವ್ರ ತನಿಖೆ ಕೈಗೊಂಡಿದ್ದಾರೆ.
ಆರೋಪಿಗಳು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿರುವ ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳ ಶವಗಳು ಇನ್ನೂ ಸಿಕ್ಕಿಲ್ಲ. ಶವಗಳಿಗಾಗಿ ಪೆÇಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಪೆÇಲೀಸರ ವಶದಲ್ಲಿರುವ ಮೂವರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿ ಕೆಲವು ಮಾಹಿತಿಗಳನ್ನು ತನಿಖಾಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ. ಹಣಕಾಸು ವಿಚಾರದಲ್ಲಿ ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಜೆ.ಪಿ.ನಗರದಿಂದ ಸುಮಾರು ಒಂದೂವರೆ ತಿಂಗಳ ಹಿಂದೆ ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಅಪಹರಿಸಿ ಕನಕಪುರ ರಸ್ತೆಯಲ್ಲಿನ ಒಂದು ಫಾರಂ ಹೌಸ್‍ಗೆ ಕರೆದೊಯ್ದು ಅಲ್ಲಿ ಕೊಲೆ ಮಾಡಿ ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಗಳು ಪೆÇಲೀಸರ ವಿಚಾರಣೆ ಸಂದರ್ಭದಲ್ಲಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಪೆÇಲೀಸರು ತೀವ್ರ ತನಿಖೆ ಕೈಗೊಂಡು ತಲೆ ಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಡಿಸಿಪಿ ಹೇಳಿಕೆ
ರಿಯಲ್ ಎಸ್ಟೇಟ್ ಉದ್ಯಮಿಗಳ ನಾಪತ್ತೆ ಪ್ರಕರಣ ಸೂಕ್ಷ್ಮವಾಗಿದ್ದು, ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಗಳು ನೀಡಿರುವ ಹೇಳಿಕೆಯನ್ನು ನಾವು ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಆರೋಪಿಗಳು ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ನಾವು ತೀವ್ರ ತನಿಖೆ ಕೈಗೊಂಡಿದ್ದೇವೆ. ಕೊಲೆ ಮಾಡಲಾಗಿದೆ ಎಂದು ಹೇಳಲಾಗಿರುವ ವ್ಯಕ್ತಿಗಳ ಶವಗಳು ಸಹ ಇನ್ನೂ ಸಿಕ್ಕಿಲ್ಲ. ತನಿಖೆ ಇನ್ನೂ ಪ್ರಗತಿಯಲ್ಲಿರುವುದರಿಂದ ಈ ಪ್ರಕರಣದಲ್ಲಿ ಸ್ಪಷ್ಟ ಮಾಹಿತಿ ನೀಡಲು ಈಗ ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಶವಗಳು ಸಿಕ್ಕಿದ ಮೇಲೆ ತನಿಖೆ ಪೂರ್ಣಗೊಂಡ ನಂತರ ಎಲ್ಲಾ ವಿಷಯಗಳನ್ನು ವಿವರವಾಗಿ ತಿಳಿಸಲಾಗುವುದು ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ