ಚೆನ್ನೈ:ಆ-6: ತಮಿಳುನಾದು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರ ಆರೋಗ್ಯ ಮತ್ತೆ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಜ್ವರ, ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯಷ್ಟೇ ಕರುಣಾನಿಧಿ ಆರೋಗ್ಯದಲ್ಲಿ ಚೆತರಿಕೆ ಕಂಡುಬಂದ ಹಿನ್ನಲೆಯಲ್ಲಿ ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದರು.
ಆದರೀಗ ಕರುಣಾನಿಧಿ ಅವರ ಆರೋಗ್ಯದಲ್ಲಿ ‘ಗಂಭೀರ ವ್ಯತ್ಯಯ’ವಾಗಿದೆ ಎಂದು ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಅಲ್ಲದೆ ಕರುಣಾನಿಧಿ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರು ಮತ್ತೊಂದಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ ಎಂದು ಹೇಳಿದೆ.
ಅಂತೆಯೇ ಅವರ ಅಭಿಮಾನಿಗಳಿಗೂ ಕಿವಿ ಮಾತು ಹೇಳಿರುವ ಆಸ್ಪತ್ರೆ ಆಡಳಿತ ಮಂಡಳಿ ಆಸ್ಪತ್ರೆಯಲ್ಲಿ ಕುರುಣಾನಿಧಿ ಅವರಿಗೆ ಅತ್ಯುನ್ನತ ಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟ ಪಡಿಸಿದೆ.
ಇನ್ನು ಕರುಣಾನಿಧಿ ಅರೋಗ್ಯ ಸುಧಾರಿಸಲಿ ಎಂದು ಹಾರೈಸಿ ಆಸ್ಪತ್ರೆ ಆವರಣದಲ್ಲೇ ಮೊಕ್ಕಾಂ ಹೂಡಿರುವ ಅವರ ಅಭಿಮಾನಿಗಳಿಗೆ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.
DMK,M Karunanidhi,Health Condition,Critical