
ಸುಕ್ಮಾ: ಛತ್ತೀಸ್ ಗಢದ ಸುಕ್ಮಾದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಪೊಲೀಸರು ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ 14 ಜನ ನಕ್ಸಲರು ಮೃತಪಟ್ಟಿದ್ದಾರೆ.
ಸುಕ್ಮಾ ಜಿಲ್ಲೆಯ ಗೋಲಾಪಲ್ಲಿ ಹಾಗೂ ಕೊಂಟಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು, ಸದ್ಯ 14 ಜನ ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧೀಕ್ಷಕರ ಅಭಿಷೇಕ್ ಮೀನಾ ತಿಳಿಸಿದ್ದಾರೆ.