ನಾಳೆ ರಾಷ್ಟ್ರ ವ್ಯಾಪಿ ಸಾರಿಗೆ ಮುಷ್ಕರ

ಬೆಂಗಳೂರು, ಆ.6- ಮೋಟಾರ್ ವಾಹನ ತಿದ್ದುಪಡಿ ಮಸೂದೆ – 2017ನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಸಾರಿಗೆ ಕಾರ್ಮಿಕರ ಸಂಘಟನೆಗಳು ನಾಳೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದಲ್ಲೂ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ರಸ್ತೆ ಸಾರಿಗೆ ರಂಗದ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆಯು ಈ ಪ್ರತಿಭಟನೆಗೆ ಕರೆ ನೀಡಿದ್ದು, ನಾಳೆ ಸಾರ್ವಜನಿಕ ಸಾರಿಗೆ ಹಾಗೂ ಖಾಸಗಿ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ನಾಳೆ ಬೆಳಗ್ಗೆ 6ಗಂಟೆಯಿಂದ ಸಂಜೆ 6ರವರೆಗೆ ಸಂಪೂರ್ಣ ಬಂದ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ. ನಾಳೆ ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೂ ಬೃಹತ್ ಮೆರವಣಿಗೆ ನಡೆಯಲಿದೆ. ನಂತರ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಪ್ರಕಾಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಮೋಟಾರು ವಾಹನ(ತಿದ್ದುಪಡಿ) ಮಸೂದೆ- 2017 ಅನ್ನು ಹಿಂಪಡೆಯುವಂತೆ ಒತ್ತಾಯಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇದೊಂದು ಚಾಲಕರ ಮತ್ತು ಜನ ವಿರೋಧಿ ಮಸೂದೆಯಾಗಿದೆ. ಒಂದು ವೇಳೆ ಈ ಮಸೂದೆ ಜಾರಿಯಾದರೆ, ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇರುವುದಿಲ್ಲ , ವಾಹನಗಳ ಪರ್ಮೀಟ್ ನೀಡುವಿಕೆ, ರಾಜ್ಯಗಳ ಸಾರಿಗೆ ನೀತಿ ನಿರೂಪಣೆ, ತೆರಿಗೆ ಸಂಗ್ರಹ ಮುಂತಾದ ವಿಷಯಗಳಲ್ಲಿ ರಾಜ್ಯಗಳ ಅಧಿಕಾರ ಮೊಟಕಾಗಲಿದೆ. ಈಗ ರಾಜ್ಯಗಳ ಕೈಯಲ್ಲಿರುವ ಅಂತರ್ ರಾಜ್ಯ ಪರ್ಮಿಟ್ ನೀಡುವ ಅಧಿಕಾರ ಕೇಂದ್ರದ ಪಾಲಾಗಲಿದೆ. ರಾಜ್ಯ ಪರವಾನಿಗೆ ಮತ್ತು ಕಾಂಟ್ರಾಕ್ಟ್ ಪರ್ಮಿಟ್‍ಗಳ ಬದಲಿಗೆ ಒಂದೇ ಪರ್ಮಿಟ್ ಬರಲಿದೆ ಎಂದು ಪ್ರಕಾಶ್ ತಿಳಿಸಿದ್ದಾರೆ.
ಪ್ರಸ್ತುತ ಮಸೂದೆಯ ಪರಿಣಾಮವಾಗಿ, ದೊಡ್ಡ ಪ್ರಮಾಣದ ಉದ್ಯೋಗ ನಾಶವಾಗಲಿದೆ. ಬಿಡಿ ಭಾಗಗಳ ವ್ಯಾಪಾರಿಗಳು, ರಸ್ತೆ ಬದಿಯ ಸಣ್ಣ ಪುಟ್ಟ ವರ್ಕ್‍ಶಾಪ್‍ಗಳು, ರಿಪೇರಿ ಕೆಲಸಗಾರರು ಮುಂತಾದ ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಮತ್ತು ಕುಶಲಕರ್ಮಿಗಳು ತಮ್ಮ ಕೆಲಸ ಕಳೆದುಕೊಳ್ಳಲಿದ್ದಾರೆ. ಸಾರಿಗೆ ರಂಗದ ಕಾಪೆರ್Çೀರೇಟೀಕರಣ ಮಾಡುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕೆಎಸ್‍ಆರ್‍ಟಿಸಿಯ ನಾಲ್ಕು ವಿಭಾಗಗಳಲ್ಲಿ ಒಟ್ಟು 26 ಸಾವಿರ ಬಸ್‍ಗಳಿದ್ದು, ಚಾಲಕರು ಕರ್ತವ್ಯಕ್ಕೆ ಹಾಜರಾಗದೆ ನಾಳೆಯ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರ ನಮ್ಮ ವಿರುದ್ಧ ಕ್ರಮಕೈಗೊಂಡರೆ ಅದನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಕರಾರಸಾನಿ ನೌಕರರ ಒಕ್ಕೂಟದ ಅಧ್ಯಕ್ಷ ಎಚ್.ಡಿ.ರೇವಪ್ಪ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಮುಷ್ಕರಕ್ಕೆ ಕೆ ಎಸ್‍ಆರ್ ಟಿಸಿ ನೌಕರರ ಒಕ್ಕೂಟ, ಓಟಿಯು ಚಾಲಕರು ಮತ್ತು ಮಾಲೀಕರ ಸಂಘ, ಎಆರ್‍ಡಿಯು ಸಂಘ, ಏರ್‍ಪೆÇೀರ್ಟ್ ಟ್ಯಾಕ್ಸಿ ಚಾಲಕರ ಸಂಘ, ಪೀಸ್ ಆಟೋ , ಕೆಎಸ್‍ಆರ್‍ಟಿಸಿ ಎಸ್‍ಸಿ/ ಎಸ್‍ಟಿ ನೌಕರರ ಸಂಘ, ಕೆಎಸ್‍ಆರ್‍ಟಿಸಿ/ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ವಾಣಿಜ್ಯ ಚಾಲಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ.
ನೌಕರರಿಗೆ ಎಚ್ಚರಿಕೆ
ಮುಷ್ಕರದಲ್ಲಿ ಭಾಗಿಯಾದ ನೌಕರರು ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‍ಆರ್‍ಟಿಸಿ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಆಡಳಿತ ಮಂಡಳಿ, ಸಂಸ್ಥೆಯ ನೌಕರರಿಗೆ ಸೂಚನೆ ನೀಡಿದೆ.
ನಾಳೆ ಎಂದಿನಂತೆ ಸರ್ಕಾರಿ ಬಸ್‍ಗಳು ಸಂಚರಿಸಲಿವೆ. ಬಸ್‍ಗಳ ಸಂಚಾರ ಸ್ಥಗಿತವಿಲ್ಲ ಎಂದು ಕೆಎಸ್‍ಆರ್‍ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಎಐಟಿಯುಸಿ ಸ್ಪಷ್ಟನೆ:
ನಾಳೆಯ ಬಂದ್‍ಗೆ ಎಐಟಿಯುಸಿ ಬೆಂಬಲ ನೀಡುವುದಿಲ್ಲ ಎಂದು ಮುಖಂಡ ಅನಂತ ಸುಬ್ಬರಾವ್ ಸ್ಪಷ್ಟಪಡಿಸಿದ್ದಾರೆ. ಎಂದಿನಂತೆ ನಮ್ಮ ಸದಸ್ಯರು ಕೆಲಸಕ್ಕೆ ಹಾಜರಾಗಲಿದ್ದಾರೆ. ಪ್ರಯಾಣಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ