ಉಗ್ರರ ಗುಂಡೆಟಿಗೆ ಮೂವರು ಯೋಧರು ಹುತಾತ್ಮ; ಇಬ್ಬರು ಉಗ್ರರ ಹತ್ಯೆ

ಶ್ರೀನಗರ:ಆ-7: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ಒಳನುಸುಳುವಿಕೆ ಹೆಚ್ಚಿದ್ದು, ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ನಡಿಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಬಲಿಯಾಗಿದ್ದು, ಉಗ್ರರ ಗುಂಡಿಗೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಸದ್ಯ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು ಅಡಗಿ ಕುಳಿತಿರುವ ಉಗ್ರರ ಶೋಧಕ್ಕೆ ಸೇನೆ ಮುಂದಾಗಿದೆ.

Jammu-kashmir,Army Major, 3 soldiers killed,forces foil infiltration bid

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ