ಕರುಣಾನಿಧಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಸಂತಾಪ

ಬೆಂಗಳೂರು:ಆ-7: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದ ಸುದ್ದಿ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಇಡೀ ದೇಶವು ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾನು ಕರುಣಾನಿಧಿ ಅವರನ್ನು ಸುಮಾರು 5 ದಶಕಗಳಿಂದ ಬಹಳ ಹತ್ತಿರದಿಂದ ಬಲ್ಲೆ. ಈ ದಿನ ನಾನು ನನ್ನ ಹಿರಿಯ ಅಣ್ಣನನ್ನು ಕಳೆದುಕೊಂಡಿದ್ದೀನಿ ಎಂದು ಭಾವುಕರಾದರು.

ನಾನು ಪ್ರಧಾನ ಮಂತ್ರಿ ಆಗಬೇಕಾದರೆ ಕರುಣಾನಿಧಿ ಅವರ ಪಾತ್ರ ಬಹಳ ದೊಡ್ಡದು.ಇಂದು ಇಡಿ ದೇಶಕ್ಕೆ ಮತ್ತು ವಯಕ್ತಿಕವಾಗಿ ನನಗೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ.

ದೇವರು ಅವರ ಕುಟುಂಬಕ್ಕೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುವೆ ಎಂದು ತಿಳಿಸಿದ್ದಾರೆ.

DMK,Karunanidhi death,H D Deve gowda condolence

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ