ಮೊದಲ ತ್ರೈಮಾಸಿಕ ಅವಧಿಯಲ್ಲೇ ಪಿಎನ್ ಬಿಗೆ 940 ಕೋಟಿ ರು. ನಷ್ಟ

ನವದೆಹಲಿ: ಹಗರಣ ಪೀಡಿತ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) 2018-19ನೇ ಸಾಲಿನ ಹಣಕಾಸು ವರ್ಷದಲ್ಲಿ ಮೊದಲ ತ್ರೈಮಾಸಿಕ ಅವಧಿಯಲ್ಲೇ 940 ಕೋಟಿ ರುಪಾಯಿ ನಷ್ಟ ಅನುಭವಿಸಿದೆ.
2017-18ನೇ ಸಾಲಿನ ಏಪ್ರಿಲ್ – ಜೂನ್ ತ್ರೈಮಾಸಿಕದಲ್ಲಿ ಪಿಎನ್ ಬಿ 343.40 ಕೋಟಿ ರುಪಾಯಿ ನಷ್ಟ ಅನುಭವಿಸಿತ್ತು.
ಒಂದು ವರ್ಷದ ಹಿಂದೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಒಟ್ಟು ಆದಾಯ 14,468.14 ಕೋಟಿ ರು.ಯಿಂದ 15,072 ಕೋಟಿಗೆ ಏರಿಕೆಯಾಗಿತ್ತು. ಆದರೆ ಜೂನ್ 30, 2018ರ ವೇಳೆಗೆ ಬ್ಯಾಂಕಿನ ಅನುತ್ಪಾದಕ ಆಸ್ತಿ ಮೌಲ್ಯ(ಎನ್ ಪಿಎ) ಶೇ.18.26ಕ್ಕೆ ಏರಿಕೆಯಾಗಿರುವುದರಿಂದ ಸಾರ್ವಜನಿಕ ವಲಯದ ಬ್ಯಾಂಕ್ ನಷ್ಟ ಅನುಭವಿಸುತ್ತಿದೆ ಎಂದು ವರದಿ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ