
ಬೆಂಗಳೂರು, ಆ.7-ಕನ್ನಡ ಸಾಹಿತ್ಯ ಲೋಕದ ಹಿರಿಯ ಬರಹಗಾರ ಹಾಗೂ ನ್ಯಾಷನಲ್ ಬುಕ್ ಟ್ರಸ್ಟ್ನ ಮಾಜಿ ಅಧ್ಯಕ್ಷ ಡಾ.ಸುಮತೀಂದ್ರ ನಾಡಿಗ್ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕøತಿ ಸಚಿವೆ ಡಾ.ಜಯಮಾಲಾ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಡಿಗ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಅವರು ಸಚಿವರು ವಿಷಾದ ವ್ಯಕ್ತಪಡಿಸಿದ್ದಾರೆ.
ಆಂಗ್ಲ ಭಾಷೆಯಲ್ಲಿ ಎರಡು ಸ್ನಾತಕ ಪದವಿಗಳನ್ನು ಪಡೆದಿದ್ದರು. ಕನ್ನಡ ಭಾಷೆಯಲ್ಲಿಯೇ ತಮ್ಮ ಸಾಹಿತ್ಯ ಕೃಷಿ ಮಾಡಿದ ಕೀರ್ತಿಗೆ ನಾಡಿಗ್ ಭಾಜನರಾಗಿದ್ದರು.
ನವ್ಯ ಸಾಹಿತ್ಯದ ಪ್ರವರ್ತಕರಲ್ಲಿ ಒಬ್ಬರಾಗಿ ಕನ್ನಡ ಸಾಹಿತ್ಯಕ್ಕೆ ಆಧುನಿಕತೆಯ ಸ್ಪರ್ಶ ನೀಡಿದ್ದರು. ಕಾವ್ಯ, ಸಣ್ಣಕಥೆಗಳ ಕ್ಷೇತ್ರದಲ್ಲೂ ದೊಡ್ಡ ಸಾಧನೆಯನ್ನು ಮಾಡಿದ್ದಾರೆ ಎಂದು ಶೋಕ ಸಂದೇಶದಲ್ಲಿ ಬಣ್ಣಿಸಿದ್ದಾರೆ.
ಮೃತ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.