ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು-ಸಚಿವ ಸಿ.ಎಸ್.ಪುಟ್ಟರಾಜು

 

ಬೆಂಗಳೂರು, ಆ.8- ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಪಕ್ಷವಿದ್ದರೆ ನಾವು. ಹಾಗಾಗಿ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಲು ಆದ್ಯತೆ ನೀಡಲಾಗುವುದು ಎಂದರು.
ಕಳೆದ ಒಂದು ವಾರದಿಂದ ಒಬ್ಬೊಬ್ಬರು ಸಚಿವರು ಆಗಮಿಸಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಾಧ್ಯವಾದಷ್ಟು ಸಚಿವರ ಮಟ್ಟದಲ್ಲೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವಿಧಾನಸೌಧಕ್ಕೆ ಪ್ರತಿಯೊಬ್ಬರೂ ಬಂದು ಸಚಿವರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಕುಂದು ಕೊರತೆ ಆಲಿಸಲಾಗುತ್ತಿದೆ ಎಂದರು.
ಜೆಡಿಎಸ್ ಭೂತ್ ಸಮಿತಿ ಅಧ್ಯಕ್ಷ ಸುರೇಶ್‍ಬಾಬು, ಬೆಂಗಳೂರು ಮಹಾನಗರ ಘಟಕದ ಆರ್.ಪ್ರಕಾಶ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ