ಮುಂಗಾರು ಮಳೆ ಅಬ್ಬರಕ್ಕೆ ಕೇರಳದಲ್ಲಿ 20 ಜನ ಬಲಿ: ಎನ್ ಡಿ ಆರ್ ಎಫ್ ತಂಡ ರವಾನೆ

ತಿರುವನಂತಪುರಂ:ಆ-9: ಕೇರಳದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮಳೆ ಸಂಬಂಧಿತ ಪ್ರಕರಣಗಳಲ್ಲಿ ಸಾವನ್ನಪ್ಪಿದ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ಜನಜೀವನ ಸಂಪುರ್ಣ ಅಸ್ಥವ್ಯಸ್ಥಗೊಂಡಿದೆ.

ಇಡುಕ್ಕಿ ಜಿಲ್ಲೆಯೊಂದರಲ್ಲೇ ಅತೀ ಹೆಚ್ಚು ಅಂದರೆ ಕಳೆದೆರಡು ದಿನಗಳಲ್ಲಿ 128.6 ಮಿಮಿ ಮತ್ತು 124 ಮಿಮೀ ಮಳೆಯಾಗಿದ್ದು, ತೋಡುಪುಳಾ ಮತ್ತು ಮುನ್ನಾರ್ ನಲ್ಲಿ 107.3 ಮತ್ತು 54.2 ಮಿ.ಮೀ ಮಳೆಯಾಗಿದೆ. ಕೇರಳದ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅಕ್ಷರಶಃ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಈ ವರೆಗೆ ಮಳೆಗೆ 20 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಮಲಪ್ಪುರಂವೊಂದರಲ್ಲೇ 5 ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಚೆಲಿಯಾರ್ ನದಿಯಲ್ಲಿ ಈ ದೇಹಗಳು ಪತ್ತೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನಲೆಯಲ್ಲಿ ಇಂದು ಸಿಎಂ ಪಿಣರಾಯಿ ವಿಜಯನ್ ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಸ್ತುತ ಕೇರಳದಲ್ಲಿ ಪರಿಸ್ಥಿತಿ ಕೊಂಚ ವ್ಯತಿರಿಕ್ತವಾಗಿದೆ. ಆದರೂ ಸರ್ಕಾರ ಸೂಕ್ತ ಕ್ರಮಗಳನ್ನು ಕೊಗೊಳ್ಳಲಿದೆ. ಸಂಭಾವ್ಯ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಿದ್ಧವಾಗಿದ್ದು, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಕೇಂದ್ರೀಯ ಪ್ರಕೃತಿ ವಿಕೋಪ ಸಿಬ್ಬಂದಿಗಳನ್ನು ಮತ್ತು ಅಗತ್ಯ ಪರಿಕರಗಳನ್ನು ರವಾನಿಸುವಂತೆ ಕೇಳಿಕೊಳ್ಳಲಾಗಿದೆ.

ಈಗಾಗಲೇ 3 ಎನ್ ಡಿಆರ್ ಎಫ್ ತಂಡ ಕೇರಳಕ್ಕೆ ಆಗಮಿಸಿದ್ದು, ಇತರೆ ಎರಡು ತಂಡ ಶೀಘ್ರ ಕೇರಳಕ್ಕೆ ಆಗಮಿಸಲಿದೆ. ರಾಜ್ಯದ 6 ತಂಡಗಳು ಈಗಾಗಲೇ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.

ರಾಜ್ಯದ ಬಹುತೇಕ ಡ್ಯಾಂ ಗಳು ಭರ್ತಿಯಾಗಿದ್ದು, ಇಂದಿನಿಂದ ಡ್ಯಾಂನಿಂದ ನೀರು ಹೊರ ಬಿಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇಂದು ಮಧ್ಯಾಹ್ನ ಇಡುಕ್ಕಿ ಡ್ಯಾಂ ನಿಂದ ಸುಮಾರು 50 ಸಾವಿರ ಲೀಟರ್ ನೀರನ್ನು ಹೊರ ಬಿಡಲಾಗಿದೆ. ಇದೇ ಕಾರಣಕ್ಕೆ ನದಿ ಪಾತ್ರದ ಜನರು ಯಾವುದೇ ಕಾರಣಕ್ಕೂ ನದಿಯಲ್ಲಿರದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಈ ನಡುವೆ ವ್ಯತಿರಿಕ್ತ ಹವಾಮಾನ ಹಿನ್ನಲೆಯಲ್ಲಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾತವನ್ನು ಎರಡಿ ಗಂತೆಗಳ ಕಾಲ ಸ್ಥಗಿತಗೊಳಿಸಲಾಯಿತು.

20 Dead, As Rain Pounds Kerala,Kochi Airport Stopped Arrivals For 2 Hours

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ