ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ಜಿಲ್ಲಾ ಪ್ರವಾಸ

ಬೆಂಗಳೂರು,ಆ.9- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆಯಿಂದ ಮೂರು ದಿನಗಳ ಕಾಲ ಮೈಸೂರು, ಮಂಡ್ಯ, ಧಾರವಾಡ ಬಾಗಲಕೋಟೆ ಹಾಗೂ ವಿಜಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ ಸಂಜೆ ಮೈಸೂರಿಗೆ ತೆರಳುವ ಮುಖ್ಯಮಂತ್ರಿಗಳು ಅಲ್ಲೆ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಬೆಳಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದು, ನಂತರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ರೈತರೊಂದಿಗೆ ಭತ್ತ ನಾಟಿ ಮಾಡುವ ಮೂಲಕ ಇಸ್ರೇಲ್ ಮಾದರಿ ಕೃಷಿಗೆ ಚಾಲನೆ ನೀಡಲಿದ್ದಾರೆ.
ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಧ್ಯಾಹ್ನ ಕೆಆರ್‍ಎಸ್‍ಗೆ ಭೇಟಿ ನೀಡಲಿದ್ದಾರೆ. ಶನಿವಾರ ಸಂಜೆ ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿರುವ ಚುಂಚನಕಟ್ಟೆ ಜಲಪಾತೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.
ಭಾನುವಾರ ಬೆಳಗ್ಗೆ ಅರಣ್ಯ ಮತ್ತು ಅಂಚೆ ಇಲಾಖೆ ವತಿಯಿಂದ ಆಯೋಜಿಸುವ ವಿಶ್ವ ಆನೆ ದಿನಾಚರಣೆ ಅಂಗವಾಗಿ ಹೊರತರುವ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಲಿದ್ದಾರೆ.
ಇದಾದ ಬಳಿಕ ಹುಬ್ಬಳ್ಳಿಗೆ ತೆರಳುವ ಮುಖ್ಯಮಂತ್ರಿಗಳು ಹುಬ್ಬಳ್ಳಿ ನೂತನ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ. ಆಲಮಟ್ಟಿ ಜಲಾಶಯಕ್ಕೆ ಸಂಜೆ ಬಾಗಿನ ಅರ್ಪಿಸಿಲಿದ್ದಾರೆ.
ಅಂದು ರಾತ್ರಿ ಹುಬ್ಬಳ್ಳಿಯಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗುವ ಕಾರ್ಯಕ್ರಮವಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ