ಸರಕು ಮತ್ತು ಸೇವಾ ತೆರಿಗೆ ಕುರಿತ ಮಾಹಿತಿಗೆ ಕಾರ್ಯಾಗಾರ

Varta Mitra News

ಬೆಂಗಳೂರು, ಆ.9-ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸರಕು ಮತ್ತು ಸೇವಾ ತೆರಿಗೆ ಕುರಿತ ಪರಿಪೂರ್ಣ ಮಾಹಿತಿ ಒದಗಿಸಲು ಕಾರ್ಯಾಗಾರ ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಎಫ್‍ಕೆಸಿಸಿಐ ನೂತನ ಅಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಾಗಾರದಿಂದ ಒಂದು ಲಕ್ಷ ಜನರಿಗೆ ತರಬೇತಿ ನೀಡುವ ಉದ್ದೇಶವಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಎನ್‍ಆರ್‍ಐಗಳನ್ನು ಆಕರ್ಷಿಸುವ ಜತೆಗೆ ಯುವಕರಿಗೆ ಉದ್ಯೋಗ ಒದಗಿಸುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದರು.
ಈಗಾಗಲೇ ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿದ್ದು, ಎಫ್‍ಕೆಸಿಸಿಐನಲ್ಲಿರುವ ಎನ್‍ಆರ್‍ಐ ಫೆÇೀರಂಗೆ 50 ಜನ ಅನಿವಾಸಿ ಭಾರತೀಯರನ್ನು ಸದಸ್ಯರನ್ನಾಗಿಸಿ ರಾಜ್ಯದಲ್ಲಿ ಹೂಡಿಕೆ ಮಾಡಲು ಆಹ್ವಾನ ನೀಡಲಾಗುತ್ತಿದೆ. ಈ ಬಗ್ಗೆ ಸರ್ಕಾರದೊಂದಿಗೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಪಡಿಸುವ ಕೆಲಸವಾಗಬೇಕು. ಭೋಗ್ಯ ಮತ್ತು ಮಾರಾಟದ ಅವಧಿಯನ್ನು 99 ವರ್ಷದ ಬದಲಿಗೆ 10 ವರ್ಷಗಳಿಗೆ ನಿಗದಿಯಾಗಬೇಕು. ಒಮ್ಮೆ ಕೈಗಾರಿಕಾ ಪ್ರದೇಶವೆಂದು ಗುರುತಿಸಿದ ಮೇಲೆ ಅದನ್ನು ಬದಲಾಯಿಸದಂತೆ ನಿಯಮ ರೂಪಿಸಬೇಕೆಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ