![kerala-rain](http://kannada.vartamitra.com/wp-content/uploads/2018/08/kerala-rain-1-674x381.jpg)
ತಿರುವನಂತಪುರಂ: ಆ-೧೦: ಮುಂಗಾರು ಮಳೆಯ ಅಬ್ಬರಕ್ಕೆ ತತ್ತರಿಸಿರುವ ಕೇರಳದಲ್ಲಿ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಅಕ್ಷರಶ: ಪ್ರವಾ ಪರಿಸ್ಥಿತಿಗೆ ಸಿಲುಕಿರುವ ರಾಜ್ಯದ ಜನಜೀವನ ಸಂಪೂರ್ಣ ಅಸ್ಥವ್ಯಸ್ಥವಾಗಿದೆ.
ಸಚಿವ ಕೆಜೆ ಅಲ್ಫಾನ್ಸೋ ನೀಡಿರುವ ಮಾಹಿತಿ ಪ್ರಕಾರ, ಕೇರಳದ ವಿವಿಧೆಡೆ ಸಂಭವಿಸಿದ ಮಳೆ ಸಂಬಂಧಿತ ಪ್ರಕರಣಗಳಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಇಡುಕ್ಕಿ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಪ್ರಮಾಣದ ಹಾನಿಯಾಗಿದ್ದು, ಭೂಕುಸಿತ ಉಂಟಾಗಿ, ಪ್ರವಾಹದಲ್ಲಿ ಹಲವರು ಕೊಚ್ಚಿ ಹೋಗಿದ್ದಾರೆ. ಇಲ್ಲಿ ಸಂಭವಿಸಿದ ಗೋಡೆ ಕುಸಿತ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ.
ಕಲ್ಲಿಕೋಟೆ, ವಯನಾಡ್, ಪಾಲಕ್ಕಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಕೊಲ್ಲಂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಶಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನೆಹರೂ ಬೋಟ್ ರೇಸ್ ಕಾರ್ಯಕ್ರವನ್ನು ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಇಡುಕ್ಕಿ ಜಿಲ್ಲೆಯೊಂದರಲ್ಲೇ ಅತೀ ಹೆಚ್ಚು ಅಂದರೆ ಕಳೆದೆರಡು ದಿನಗಳಲ್ಲಿ 128.6 ಮಿಮಿ ಮತ್ತು 124 ಮಿಮೀ ಮಳೆಯಾಗಿದ್ದು, ತೋಡುಪುಳಾ ಮತ್ತು ಮುನ್ನಾರ್ ನಲ್ಲಿ 107.3 ಮತ್ತು 54.2 ಮಿ.ಮೀ ಮಳೆಯಾಗಿದೆ. ಪರಿಣಾಮ ಕೇರಳದ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳೆದ 50 ವರ್ಷಗಳಲ್ಲೇ ಕಾಣದಂತಹ ಭಾರೀ ಮಳೆ ಕೇರಳದಲ್ಲಾಗುತ್ತಿದ್ದು, ಭಾರೀ ಅನಾಹುತಕ್ಕೆ ಕಾರನವಾಗಿದೆ.
kerala,Heavy Rain, 27 dead