ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವ

Varta Mitra News

ಬೆಂಗಳೂರು, ಆ.10- ಬೆಂಗಳೂರು ಪುಸ್ತಕ ಮಾರಾಟಗಾರರು, ಪ್ರಕಾಶಕರ ಸಂಘ, ಇಂಡಿಯಾ ಕಾಮಿಕ್ಸ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವವನ್ನು ನಡೆಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪೆÇ್ರ.ಎಸ್.ಜಿ.ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಹಲವು ಉತ್ಸವಗಳ ತವರು ಮನೆ. ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಪುಸ್ತಕೋತ್ಸವ ನಡೆದಿಲ್ಲ. ಓದುವ ಹವ್ಯಾಸವನ್ನು ಉತ್ತೇಜಿಸುವ ದೃಷ್ಟಿಯಿಂದ ಬೆಂಗಳೂರು ಪುಸ್ತಕೋತ್ಸವ ಆಯೋಜಿಸಲಾಗುತ್ತಿದ್ದು, ಕನ್ನಡ, ತಮಿಳು, ತೆಲುಗು, ಮಲೆಯಾಳಂ, ಬಂಗಾಳಿ, ಸಂಸ್ಕøತ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಿಗೆ ಸೇರಿದ 350ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುತ್ತದೆ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪ್ರಕಟಿಸಿರುವ ಕೃತಿಗಳಿಗೆ ಶೇ.50ರಷ್ಟು ರಿಯಾಯ್ತಿ ಇರಲಿದೆ. ಸಂಶೋಧಿತ ಪುಸ್ತಕಗಳು ಹೆಚ್ಚಾಗಿರಲಿವೆ. ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗಿಲ್ಲ. ಈ ಪುಸ್ತಕೋತ್ಸವಗಳು ಹೆಚ್ಚಾದಂತೆ ಜ್ಞಾನವೂ ಹೆಚ್ಚಾಗಲಿದೆ. ಈ ಪುಸ್ತಕೋತ್ಸವದಲ್ಲಿ ಮೂರು ದಿನ ಸಾಹಿತ್ಯೋತ್ಸವ ನಡೆಯಲಿದೆ. ಎರಡು ದಿನ ಕನ್ನಡ ಸಾಹಿತ್ಯೋತ್ಸವ ನಡೆಯಲಿದ್ದು, ವಿಚಾರ ಸಂಕಿರಣ, ಕವಿಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಗ್ರಾಮೀಣ ಭಾಗದಲ್ಲಿ ಪುಸ್ತಕ ಓದುವವರ ಸಂಖ್ಯೆ ಹೆಚ್ಚಿದ್ದು, ಅವರಿಗೆ ತಲುಪಿಸುವಂತಹ ಕಾರ್ಯವಾಗಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ