ಬೆಂಗಳೂರು, ಆ.10- ಸ್ವಾತಂತ್ರ್ಯೋತ್ಸವದ ಅಂಗವಾಗಿ ಇದೇ 12ರಂದು ಫ್ರೀಡಂಪಾರ್ಕ್ನಲ್ಲಿ ಸಂಜೆ 4 ಗಂಟೆಗೆ ಪ್ರಜಾಪ್ರಭುತ್ವ ಭಾರತ ಎದುರಿಸುತ್ತಿರುವ ಸವಾಲುಗಳು ಎಂಬ ವಿಷಯದ ಕುರಿತ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ಎಸ್ಎಸ್ಎಫ್ ಬೆಂಗಳೂರು ಜಿಲ್ಲಾಧ್ಯಕ್ಷ ತಾಜುದ್ದೀನ್ ಫಾಳಿಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ (ಎಸ್ಎಸ್ಎಫ್) ಕರ್ನಾಟಕದಲ್ಲಿ 27 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಮ್ಮೊಳಗಿನ ಭಾರತ ಜಾಗೃತಗೊಳ್ಳಲಿ ಎಂಬ ಘೋಷವಾಕ್ಯದಡಿ ರಾಜ್ಯದ 27 ಜಿಲ್ಲೆಗಳಲ್ಲಿ ಆಜಾದಿ ಸಪ್ತಾಹ ಎಂಬ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಫೆಡರೇಷನ್ನ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಾದಿಯಾ ಎಜುಕೇಷನ್ ಫೌಂಡೇಷನ್ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ.ಮಹಮ್ಮದ್ ಶಾಫಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
ಜೆಡಿಎಸ್ನ ಮಹಾ ಕಾರ್ಯದರ್ಶಿ ಬಿ.ಎಂ.ಫಾರುಖ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಇತಿಹಾಸ ಸಂಶೋಧಕ ತಲಕಾಡು ಚಿಕ್ಕರಂಗೇಗೌಡ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಸಂಪಾದಕ ಬಿ.ಎಂ.ಹನೀಫ್, ರಾಜ್ಯ ಹಜ್ ಸಮಿತಿ ಸದಸ್ಯ ಕೆ.ಎಂ.ಅಬೂಬಕ್ಕರ್ ಸಿದ್ದೀಕ್, ಅಖಿಲ ಭಾರತ ಇಸ್ಲಾಮಿಕ್ ಶೈಕ್ಷಣಿಕ ಮಂಡ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಎ.ಖಾದರ್, ಹಾಜಿ ವಿಚಾರ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.