ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಸಕಲ‌ ಸಿದ್ಧತೆ

????????????????????????????????????

ಹುಬ್ಬಳ್ಳಿ-: ಹುಬ್ಬಳ್ಳಿ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ಉದ್ಘಾಟನೆಗೆ ಸಕಲ ಸಿದ್ಧತೆ ‌ಮಾಡಿಕೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಎಂ. ದೀಪಾ ಹೇಳಿದರು. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಏಷ್ಯಾದಲ್ಲೆ ಉತ್ತಮ ಸೌಲಭ್ಯ ಹೊಂದಿರುವ ಹುಬ್ಬಳ್ಳಿ ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತದಿಂದ ಮಾಡಿಕೊಳ್ಳಲಾಗಿದೆ. ನಾಳೆ ೧೧ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ಜರುಗಲಿದ್ದು, ಸುಪ್ರೀಂ ಕೋರ್ಟ ನ್ಯಾಯಮೂರ್ತಿ ದೀಪಕ್ ಮಿಶ್ರಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ವಿ ದೇಶಪಾಂಡೆ ಸೇರಿದಂತೆ ಸ್ಥಳಿ ಜನಪ್ರತಿನಿಧಿಗಳು ಭಾಗವಹಿಸುವರು. ಶಿಷ್ಠಾಚಾರದ ಪ್ರಕಾರ ಎಲ್ಲವನ್ನ ಮಾಡಿಕೊಳ್ಳಲಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ