ಬೆಂಗಳೂರು, ಆ.11-ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದರೂ ಕೇರಳ ರಾಜ್ಯದಲ್ಲಾಗುತ್ತಿರುವಂತೆ ರಾಜ್ಯದಲ್ಲೂ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಗಳಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್‍ರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆ ಇದೇ ರೀತಿ ಮುಂದುವರೆಯಲಿದೆ. ಆದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ರೀತಿಯ ಮಳೆಯಾಗುತ್ತಿಲ್ಲ. ಬಹುತೇಕ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ಕಂಡು ಬರುತ್ತಿದೆ. ಆದರೆ, ಉತ್ತಮ ಪ್ರಮಾಣದ ಮಳೆಯಾಗುತ್ತಿಲ್ಲ. ಕೆಲವೆಡೆ ಮಾತ್ರ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಸದ್ಯಕ್ಕೆ ಹವಾಮುನ್ಸೂಚನೆ ಪ್ರಕಾರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿಲ್ಲ. ರಾಜ್ಯದ ಸುಮಾರು 13 ಜಿಲ್ಲೆಗಳಲ್ಲಿ ಮಳೆಕೊರತೆ ಕಂಡು ಬಂದಿದೆ. ಇನ್ನು 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿಲ್ಲ ಎಂದು ಹೇಳಿದರು.