ಮೈಸೂರು: ಆಂಧ್ರಪ್ರದೇಶದಲ್ಲಿ ಆಗಿರುವಂತೆ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ಸಲಹೆ ಮೇರೆಗೆ ಇಸ್ರೇಲ್ ಮಾದರಿಯ ಶೂನ್ಯ ಬಂಡವಾಳ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಜಾರಿಗೆ ತರಲು ಚಿಂತಿಸಲಾಗುತ್ತಿದೆ. ಯಾವುದೇ ರೈತರು ಆತ್ಮಹತ್ಯೆ ಮಾಡಲು ಮುಂದಾಗಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮ ಸರಕಾರ ಯಾವುದೇ ವರ್ಗಾವಣೆ ದಂಧೆ ಮಾಡುತ್ತಿಲ್ಲ. ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಯಾವ ರೀತಿ ಮಾಡಿದ್ದಾರೆ ಎಂಬುದನ್ನು ಚಿಂತಿಸಬೇಕು. ಆಡಳಿತಾತ್ಮಕ ಕಾರಣಕ್ಕಾಗಿ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಫ್ರೆಂಡ್ಲಿ ಫೈಟ್ ಇರುವ ಬಗ್ಗೆ ನಮ್ಮ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಇದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.