ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ವಾಪಸ್ಸು ಕಳುಹಿಸಬೇಕು: ಹಿಂದೂ ಜನಜಾಗೃತಿ ವೇದಿಕೆ

 

ಬೆಂಗಳೂರು, ಆ.11- ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ಅಕ್ರಮ ವಲಸಿಗರನ್ನು ಗುರುತಿಸಿ ತಕ್ಷಣ ವಾಪಸ್ಸು ಕಳುಹಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆ ಸದಸ್ಯರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಇಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಮಾತನಾಡಿ, ಬಾಂಗ್ಲಾ ದೇಶದ ನಿವಾಸಿಗಳು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ. ಅವರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದು, ಅವರಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾಗುತ್ತಿದೆ. ಅಸ್ಸಾಂ ರಾಜ್ಯವೊಂದರಲ್ಲೇ ಸುಮಾರು 40 ಲಕ್ಷಕ್ಕೂ ಅಧಿಕ ಅಕ್ರಮ ವಲಸಿಗರು ನೆಲೆಸಿರುವುದು ರಾಷ್ಟ್ರೀಯ ನೋಂದಣಿಯಲ್ಲಿ ಪತ್ತೆಯಾಗಿದೆ. ವಲಸಿಗರನ್ನು ಗುರುತಿಸಿ ವಾಪಾಸ್ಸು ಕಳುಹಿಸಿಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನುಸುಳುಕೋರರಿಂದ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಈಗಾಗಲೆ ಉದ್ಯೋಗವಿಲ್ಲದೆ ಇರುವ ಯುವಕರು ಇದರಿಂದ ಮತ್ತಷ್ಟು ಸಮಸ್ಯೆ ಅನುಭವಿಸಬೇಕಾಗುತ್ತದೆ. ಕೂಡಲೆ ಎಲ್ಲ ರಾಜ್ಯ ಸರ್ಕಾರಗಳು ಅಕ್ರಮ ವಲಸಿಗರನ್ನು ಹೊರಹಾಕಬೇಕು ಎಂದು ಒತ್ತಾಯಿಸಿದರು.
ನ್ಯಾಶನಲ್ ರಿಜಿಸ್ಟರ್ ಆಫ್ ಸಿಟಿಝನ್‍ನ ಪ್ರಾಥಮಿಕ ವರದಿ ಬಿಡುಗಡೆ ಮಾಡಲಾಗಿದ್ದು, ಈ ವಿಷಯದಲ್ಲಿ ರಾಜಕೀಯ ಪಕ್ಷಗಳು ಗೊಂದಲ ಉಂಟು ಮಾಡುತ್ತಿವೆ. ಈ ಬಗ್ಗೆ ತಲೆಕೆಡಿಕೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ರಮ ವಲಸಿಗರನ್ನು ಹೊರಹಾಕಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ